ದೆಹಲಿ ವಿಶ್ವವಿದ್ಯಾಲಯಕ್ಕೆ ಮೆಟ್ರೋದಲ್ಲಿ ಪ್ರಯಾಣ – ಪ್ರಯಾಣಿಕರೊಂದಿಗೆ ಪ್ರಧಾನಿ ಮೋದಿ ಸಂವಾದ..!

ದೆಹಲಿ ವಿಶ್ವವಿದ್ಯಾಲಯಕ್ಕೆ ಮೆಟ್ರೋದಲ್ಲಿ ಪ್ರಯಾಣ – ಪ್ರಯಾಣಿಕರೊಂದಿಗೆ ಪ್ರಧಾನಿ ಮೋದಿ ಸಂವಾದ..!

ದೆಹಲಿಯಲ್ಲಿ ಮೆಟ್ರೋ ಪ್ರಯಾಣಿಕರಿಗೆ ಶುಕ್ರವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಸರ್‌ಪ್ರೈಸ್ ಕೊಟ್ಟಿದ್ದಾರೆ. ಮೆಟ್ರೋದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಪ್ರಯಾಣಿಕರು ಅಚ್ಚರಿ ಪಟ್ಟರು. ದೆಹಲಿಯ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಲೋಕ ಕಲ್ಯಾಣ ಮಾರ್ಗದಲ್ಲಿ ಕೌಂಟರ್‌ನಲ್ಲಿ ಟಿಕೆಟ್ ಟೋಕನ್ ಪಡೆದು ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಪ್ರಧಾನಿಯವರು ಮೆಟ್ರೋದಲ್ಲಿ ಪ್ರಯಾಣ ಮಾಡಿರುವುದರಿಂದ ಸಹ ಪ್ರಯಾಣಿಕರು ಕೂಡಾ ಸಂಭ್ರಮಿಸಿದರು.

ಇದನ್ನೂ ಓದಿ: ಐದು ‘ವಂದೇ ಭಾರತ್ ಎಕ್ಸ್‌ಪ್ರೆಸ್‌ʼ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ – ಬೆಂಗಳೂರು To ಧಾರವಾಡ ಇಂದಿನಿಂದ ಸಂಚಾರ

ದೆಹಲಿ ವಿಶ್ವವಿದ್ಯಾಲಯವು 100 ವರ್ಷಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನದ ಶತಮಾನೋತ್ಸವ ಸಮಾರೋಪ ಸಮಾರಂಭಕ್ಕೆ ಮೋದಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ದೆಹಲಿ ವಿಶ್ವವಿದ್ಯಾಲಯವನ್ನು ಬ್ರಿಟಿಷರ ಆಳ್ವಿಕೆಯ ಸಂದರ್ಭದಲ್ಲಿ ಮೇ1 1922 ರಲ್ಲಿ ಸ್ಥಾಪಿಸಲಾಯಿತು. ಪ್ರಧಾನಿ ಮೋದಿ ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಪಡೆದಿದ್ದಾರೆ. 1978 ರಲ್ಲಿ, PM DU ನಿಂದ BA ಮಾಡಿದರು. ದೆಹಲಿ ಮೆಟ್ರೋದಲ್ಲಿ ಸಾಮಾನ್ಯರಂತೆ ಕುಳಿತು ಪ್ರಧಾನಿ ಮೋದಿ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ವಿಶ್ವವಿದ್ಯಾಲಯದವರೆಗೆ ಹಳದಿ ಮಾರ್ಗದ ಮೆಟ್ರೋದಲ್ಲಿ ಪ್ರಯಾಣಿಸಿದರು, ಎಎಫ್ಸಿ ಗೇಟ್‌ನಿಂದ ಟೋಕನ್ ಮೂಲಕ ನಿಲ್ದಾಣ ಪ್ರವೇಶಿಸಿದ್ದರು. ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಪ್ಪು ಉಡುಪುಗಳನ್ನು ಧರಿಸಲು ನಿಷೇಧ ಹೇರಲಾಗಿದೆ. ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಹಂಸರಾಜ್ ಕಾಲೇಜು, ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜು ಮತ್ತು ಜಾಕಿರ್ ಹುಸೇನ್ ದೆಹಲಿ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಡ್ಡಾಯವಾಗಿ ಹಾಜರಿರುವಂತೆ ಆದೇಶಿಸಲಾಗಿದೆ.

suddiyaana