ರಣಕಣದಲ್ಲಿ ಮತಶಿಕಾರಿಗೆ ಬಿಜೆಪಿ ಮೋದಿ ಅಸ್ತ್ರ – ಎಲ್ಲೆಲ್ಲಿ ಪ್ರಧಾನಿಯ ಪ್ರಚಾರದ ಅಬ್ಬರ?

ರಣಕಣದಲ್ಲಿ ಮತಶಿಕಾರಿಗೆ ಬಿಜೆಪಿ ಮೋದಿ ಅಸ್ತ್ರ – ಎಲ್ಲೆಲ್ಲಿ ಪ್ರಧಾನಿಯ ಪ್ರಚಾರದ ಅಬ್ಬರ?

ಈ ಭಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ನಾಯಕರು ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೆ ಪ್ರಧಾನಿ ಮೋದಿಯವರನ್ನ ಅಖಾಡಕ್ಕಿಳಿಸುವ ಮೂಲಕ ಮತದಾರರ ಮನ ಗೆಲ್ಲೋಕೆ ತಂತ್ರ ರೂಪಿಸಿದ್ದಾರೆ. ಅದ್ರಲ್ಲೂ ಹಳೇ ಮೈಸೂರು (Old Mysuru) ಭಾಗದಲ್ಲಿ ಬಿಜೆಪಿ (BJP) ಹೆಚ್ಚು ಸ್ಥಾನ ಗೆಲ್ಲಲು ಪ್ಲ್ಯಾನ್‌ ಮಾಡಿದ್ದು ಏ.30ರಂದು ಚನ್ನಪಟ್ಟಣಕ್ಕೆ(Channapatna) ಪ್ರಧಾನಿ ಮೋದಿ (PM Narendra Modi) ಆಗಮಿಸಲಿದ್ದಾರೆ.

ಮೋದಿ ಆಗಮನ ಹಿನ್ನೆಲೆ ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ 30 ಎಕರೆಯಲ್ಲಿ ಜಾಗದಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಲಾಗಿದೆ. ಸುಮಾರು 10ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ಸಮಾವೇಶ ನಡೆಯಲಿದ್ದು ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಯಿದೆ. ಮೊದಲು ಕೋಲಾರದಲ್ಲಿ (Kolara) ಸಮಾವೇಶ ಮುಗಿಸಿ ಮಧ್ಯಾಹ್ನ 2 ಗಂಟೆಗೆ ಚನ್ನಪಟ್ಟಣಕ್ಕೆ ಮೋದಿ ತೆರಳಲಿದ್ದಾರೆ.

ಇದನ್ನೂ ಓದಿ : ಸರ್ಕಾರಿ ಬಂಗಲೆ ಖಾಲಿ ಮಾಡಲು ಇಂದೇ ಕೊನೆ ದಿನ – ರಾಹುಲ್ ಗಾಂಧಿ ಮುಂದಿನ ಪಯಣ ಗೊತ್ತಾ?

ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಲೇಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಕನಕಪುರದಲ್ಲಿ ಡಿಕೆ ಶಿವಕುಮಾರ್‌ ವಿರುದ್ಧ ಆರ್‌.ಅಶೋಕ್‌ ಮತ್ತು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಅವರನ್ನು ನಿಲ್ಲಿಸಿದೆ. ಏಪ್ರಿಲ್‌ ಕೊನೆಯ ವಾರದಿಂದ ಮೇ 7ರವರೆಗಿನ ಅವಧಿಯಲ್ಲಿ ಸುಮಾರು ಏಳು ದಿನಗಳ ಕಾಲ ಪ್ರಚಾರ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗುವ ಸಾಧ್ಯತೆಯಿದೆ. ಸುಮಾರು 20ಕ್ಕೂ ಹೆಚ್ಚು ಸಮಾವೇಶವನ್ನು ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಜಗದೀಶ್‌ ಶೆಟ್ಟರ್‌, ಲಕ್ಷ್ಮಣ ಸವದಿ ಸೇರಿದಂತೆ ಕೆಲ ಹಿರಿಯ ನಾಯಕರು ಕಾಂಗ್ರೆಸ್‌ ಸೇರ್ಪಡೆ, ಕೆಲವು ಕಡೆ ಟಿಕೆಟ್‌ ನಿರಾಕರಿಸಿದ್ದರಿಂದ ಕೆಲ ಕ್ಷೇತ್ರಗಳಲ್ಲಿ ಭಾರೀ ಸವಾಲು ಎದುರಿಸುತ್ತಿರುವ ಕಾರಣ ಬಿಜೆಪಿ ಈ ಬಾರಿ ಮೋದಿ ಕಾರ್ಯಕ್ರಮ ಹೆಚ್ಚು ಆಯೋಜಿಸಲು ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿರುವುದರಿಂದ ಪ್ರತಿ 12-14 ಕ್ಷೇತ್ರಗಳಿಗೆ ಒಂದರಂತೆ ಬೃಹತ್ ಸಮಾವೇಶ (Modi Rally) ನಡೆಸಲು ಸಿದ್ಧತೆ ನಡೆದಿದೆ. ರಾಜ್ಯವನ್ನು 6 ಭಾಗವನ್ನಾಗಿ ವಿಂಗಡಿಸಿರುವ ಬಿಜೆಪಿ ಪ್ರದೇಶವಾರು, ಕಾಂಗ್ರೆಸ್ (Congress), ಜೆಡಿಎಸ್ (JDS) ಭದ್ರಕೋಟೆಯಲ್ಲಿ ಹೆಚ್ಚು ಸಮಾವೇಶ ಆಯೋಜಿಸಲಿದೆ. ಪ್ರತಿ ಭಾಗದಲ್ಲಿ ಕನಿಷ್ಠ 3 ಕಾರ್ಯಕ್ರಮ ಆಯೋಜಿಸುವ ಸಾಧ್ಯತೆಯಿದೆ.

suddiyaana