ಟೀಮ್ ಇಂಡಿಯಾದಿಂದ ಸಿರಾಜ್ಗೆ ಗೇಟ್ ಪಾಸ್ ನೀಡಲಾಗಿದೆಯಾ? – ಗಂಭೀರ್ ಬಣ್ಣ ಮತ್ತೆ ಬಯಲು!

ಸಿರಾಜ್ ವಿಷಯಕ್ಕೆ ಗಂಭೀರ್ ನಡೆಯ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತವಾಗಿದೆ. ಟೀಮ್ ಇಂಡಿಯಾದಿಂದ ಸಿರಾಜ್ಗೆ ಗೇಟ್ ಪಾಸ್ ನೀಡಲಾಗಿದೆಯಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಯ್ಕೆ ಮಾಡಲಾದ 15 ಸದಸ್ಯರುಗಳ ಭಾರತ ತಂಡದಲ್ಲಿ ಮೊಹಮ್ಮದ್ ಸಿರಾಜ್ ಹೆಸರು ಕಾಣಿಸಿಕೊಂಡಿರಲಿಲ್ಲ. ವಿಶ್ರಾಂತಿಯ ಕಾರಣ ಸಿರಾಜ್ ಅವರನ್ನು ಏಕದಿನ ತಂಡದಿಂದ ಹೊರಗಿಡಲಾಗಿದೆ ಎನ್ನಲಾಗಿತ್ತು. ಆದರೀಗ ಅದೇ ಮೊಹಮ್ಮದ್ ಸಿರಾಜ್ ದೇಶೀಯ ಟೂರ್ನಿ ಆಡುತ್ತಿದ್ದಾರೆ. ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಹಿರಿಯ ಆಟಗಾರರಿಗೆ ಭಿನ್ನಾಭಿಪ್ರಾಯಗಳಿವೆ ಎಂಬ ಸುದ್ದಿ ನಡುವೆ ಮೊಹಮ್ಮದ್ ಸಿರಾಜ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದುಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.
ಇದನ್ನೂ ಓದಿ: ದೇಶಿ ಅಂಗಳಕ್ಕೆ ಕೊಹ್ಲಿ Re Entry – ವಿಜಯ ಹಝಾರೆ ಟೂರ್ನಿಯಲ್ಲಿ ಆಡೋಕೆ ರೆಡಿಯಾದ ವಿರಾಟ್
ಮೊಹಮ್ಮದ್ ಸಿರಾಜ್ ಅವರನ್ನು ಬೇಕಂತಲೇ ತಂಡದಿಂದ ಹೊರಗಿಡಲಾಗಿದೆಯಾ? ಎಂಬ ಅನುಮಾನಗಳು ಹುಟ್ಟಿಕೊಂಡಿದೆ. ಏಕೆಂದರೆ ವಿಶ್ರಾಂತಿ ನೀಡಿದ್ದರೆ ಸಿರಾಜ್ ದೇಶೀಯ ಟಿ20 ಟೂರ್ನಿ ಆಡುವ ಅಗತ್ಯವಿರಲಿಲ್ಲ. ಅಲ್ಲದೆ ಸಿರಾಜ್ ಅವರನ್ನು ಕಳೆದ ಕೆಲ ತಿಂಗಳಿಂದ ಭಾರತ ಟಿ20 ತಂಡದ ಆಯ್ಕೆಗೆ ಪರಿಗಣಿಸಲಾಗುತ್ತಿಲ್ಲ.
ಇದಾಗ್ಯೂ ಏಕದಿನ ಸರಣಿ ವೇಳೆ ಸಿರಾಜ್ ಟಿ20 ಪಂದ್ಯವಾಡುತ್ತಿರುವುದು ಏಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಸಿರಾಜ್ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಕೈ ಬಿಟ್ಟಿರುವುದರಿಂದಲೇ ಅವರು ದೇಶೀಯ ಟೂರ್ನಿ ಆಡುತ್ತಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಪ್ರಶ್ನೆಗಳೆದ್ದಿವೆ. ಇದರ ನಡುವೆ ಮೊಹಮ್ಮದ್ ಸಿರಾಜ್ ಅವರನ್ನು ಏಕದಿನ ಸರಣಿಯಿಂದ ಕೈ ಬಿಡಲಾಗಿರುವುದು ಕೂಡ ಬಹಿರಂಗವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ನೋಡಿರಿ

