ಟೀಂ ಇಂಡಿಯಾ ಟಿ20 ವಿಶ್ವಕಪ್ ಟೀಂನಲ್ಲಿ ಬಿಗ್ ಚೇಂಜ್ – ಹರ್ಷಿತ್ ರಾಣಾ OUT , ಮೊಹಮ್ಮದ್ ಸಿರಾಜ್ IN

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿರುವುದು ಖಚಿತವಾಗಿದೆ. ಭಾರತ ತಂಡದಲ್ಲಿದ್ದ ಆಲ್ರೌಂಡರ್ ಹರ್ಷಿತ್ ರಾಣಾ ಗಾಯಗೊಂಡು ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಮತ್ತೋರ್ವ ವೇಗಿ ಆಯ್ಕೆಯಾಗಿದ್ದಾರೆ. ಭಾರತ ತಂಡದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಇಂದು (ಫೆ.7) ಮುಂಬೈನಲ್ಲಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದಾಗ್ಯೂ ಅವರು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ.
ಏಕೆಂದರೆ ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇಂದು ರಾತ್ರಿ 7 ಗಂಟೆಗೆ ಶುರುವಾಗಲಿದೆ. ಈ ಮ್ಯಾಚ್ಗೂ ಮುನ್ನ ಮೊಹಮ್ಮದ್ ಸಿರಾಜ್ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಆದರೆ ಅತ್ತ ಟೀಮ್ ಇಂಡಿಯಾದಲ್ಲಿ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಇದ್ದು, ಇವರೊಂದಿಗೆ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಕೂಡ ಕೈ ಜೋಡಿಸಲಿದ್ದಾರೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳುವ ಸಾಧ್ಯತೆ ಇಲ್ಲ ಎನ್ನಬಹುದು. ಹೀಗಾಗಿ ಉಳಿದ ಪಂದ್ಯಗಳಲ್ಲಿ ಮೂರನೇ ವೇಗಿಯಾಗಿ ಸಿರಾಜ್ ಕಣಕ್ಕಿಳಿಯಬಹುದು.
ಟಿ20 ವಿಶ್ವಕಪ್ಗೆ ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್.

ನೋಡಿರಿ

