ಸಿರಾಜ್‌ಗೆ ನಾಯಕತ್ವ ಪಟ್ಟ!- ಹೈದರಾಬಾದ್ ಕ್ಯಾಪ್ಟನ್ ಆದ ವೇಗಿ

ಸಿರಾಜ್‌ಗೆ ನಾಯಕತ್ವ ಪಟ್ಟ!-  ಹೈದರಾಬಾದ್ ಕ್ಯಾಪ್ಟನ್ ಆದ ವೇಗಿ

ಭಾರತ ತಂಡದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ಸಿಕ್ಕಿದೆ. ಮುಂಬರುವ 2026-27ರ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಸಿರಾಜ್ ಅವರನ್ನು ಹೈದರಾಬಾದ್ ಪುರುಷರ ತಂಡದ ನಾಯಕರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಸೆಪ್ಟೆಂಬರ್ 11ರಂದು ನಡೆದ ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ ಹಿರಿಯ ಆಯ್ಕೆ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ದೇಶೀಯ ಕ್ರಿಕೆಟ್‌ನಲ್ಲಿ ಹೈದರಾಬಾದ್ ತಂಡವನ್ನು ಮುನ್ನಡೆಸುವ ಅವಕಾಶ ಸಿರಾಜ್ ಅವರಿಗೆ ಸಿಕ್ಕಿದೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ತಂಡದ ಪ್ರಮುಖ ವೇಗದ ಬೌಲರ್ ಆಗಿ ಗುರುತಿಸಿಕೊಂಡಿರುವ ಸಿರಾಜ್, ತಮ್ಮ ಆಕ್ರಮಣಕಾರಿ ಬೌಲಿಂಗ್ ಮತ್ತು ಹೋರಾಟದ ಮನೋಭಾವದಿಂದ ಗಮನ ಸೆಳೆದಿದ್ದಾರೆ. ಇದೀಗ ನಾಯಕನಾಗಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಅವರ ಹೆಗಲೇರಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪಿಂಕ್‌ ಲೈನ್‌ ಬಗ್ಗೆ ಬಿಗ್‌ ಅಪ್‌ಡೇಟ್!‌ – ಗುಲಾಬಿ ಮಾರ್ಗ 7.5 ಕಿ.ಮೀ ಮಾರ್ಗ ಉದ್ಘಾಟನೆಗೆ ಸಿದ್ಧ!

ರಣಜಿ ಟ್ರೋಫಿ ಭಾರತದ ಪ್ರಮುಖ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿಗಳಲ್ಲಿ ಒಂದಾಗಿದ್ದು, ಇಲ್ಲಿ ಸಿರಾಜ್ ಅವರ ನಾಯಕತ್ವ ಹೈದರಾಬಾದ್ ತಂಡಕ್ಕೆ ಹೆಚ್ಚಿನ ಬಲ ನೀಡುವ ನಿರೀಕ್ಷೆಯಿದೆ. ವಿಶೇಷವಾಗಿ ಯುವ ಆಟಗಾರರಿಗೆ ಸಿರಾಜ್ ಅವರ ಅನುಭವ ಮತ್ತು ಮಾರ್ಗದರ್ಶನ ಸಹಾಯಕವಾಗಬಹುದು.

ಇದೀಗ ನಾಯಕನಾಗಿ ಸಿರಾಜ್ ಅವರ ಮುಂದಿರುವ ಪ್ರಮುಖ ಸವಾಲು ಹೈದರಾಬಾದ್ ತಂಡವನ್ನು ಬಲಿಷ್ಠವಾಗಿ ಸಂಘಟಿಸಿ, ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿಸುವುದಾಗಿದೆ. ಸಿರಾಜ್ ಅವರ ನಾಯಕತ್ವದಲ್ಲಿ ಹೈದರಾಬಾದ್ ತಂಡ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿದೆ.

Kishor KV

Leave a Reply

Your email address will not be published. Required fields are marked *