‘₹2 ಕೋಟಿ ಪಡೆದು ಡಿಕೆಶಿ ಟಿಕೆಟ್ ಕೊಟ್ಟಿದ್ದಾರೆ’  – ‘ಕೈ’ ಬಿಟ್ಟು ‘ತೆನೆ’ ಹೊತ್ತ ಮೊಯಿದ್ದೀನ್ ಬಾವ!

‘₹2 ಕೋಟಿ ಪಡೆದು ಡಿಕೆಶಿ ಟಿಕೆಟ್ ಕೊಟ್ಟಿದ್ದಾರೆ’  – ‘ಕೈ’ ಬಿಟ್ಟು ‘ತೆನೆ’ ಹೊತ್ತ ಮೊಯಿದ್ದೀನ್ ಬಾವ!

ಕರ್ನಾಟಕ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಮತಶಿಕಾರಿಯೂ ಶುರುವಾಗಿದೆ. ಆದರೆ ಟಿಕೆಟ್ ಕೈತಪ್ಪಿರೋ ಆಕಾಂಕ್ಷಿಗಳು ಪಕ್ಷದ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದು ಬಂಡಾಯದ ಬಾವುಟ ಹಾರಿಸಿದ್ದಾರೆ. ಇದೀಗ ಟಿಕೆಟ್ ಮಿಸ್ ಆಗಿದ್ದಕ್ಕೆ ಕಾಂಗ್ರೆಸ್​ನ ಮತ್ತೊಂದು ಟಿಕೆಟ್ ಪತನವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕಾಂಗ್ರೆಸ್ (Congress) ಟಿಕೆಟ್‌ನ್ನು ಮಾರಾಟ ಮಾಡಿದ್ದಾರೆ ಎಂದು ಮಾಜಿ ಶಾಸಕ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯಿದ್ದೀನ್ ಬಾವ (Mohiuddin Bava) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊನೇ ಕ್ಷಣದಲ್ಲಿ ತನಗೆ ಟಿಕೆಟ್ ಕೈತಪ್ಪಿ ಇನಾಯತ್ ಅಲಿಗೆ (Inayat Ali) ಕಾಂಗ್ರೆಸ್‌ ಟಿಕೆಟ್ ಒಲಿದ ಪರಿಣಾಮ ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರು ತಿಂಗಳ ಹಿಂದೆ ಜಿಲ್ಲೆಗೆ ಬಂದ ಗುತ್ತಿಗೆದಾರನಿಗೆ ಟಿಕೆಟ್ ಮಾರಾಟ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ : ಈಶ್ವರಪ್ಪ ಪುತ್ರನಿಗೆ ತಪ್ಪಿದ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ – ಬಿಜೆಪಿ ಲೆಕ್ಕಾಚಾರಗಳೇನು?

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಹನ್ನೊಂದು ಜನ ಟಿಕೆಟ್ ಆಕಾಂಕ್ಷಿಗಳು ಇದ್ದರು. ರಾಹುಲ್ ಗಾಂಧಿಯವರು ಕಳಿಸಿದ ಸರ್ವೇ ಟೀಂ ಆಧಾರದಲ್ಲಿ ಟಿಕೆಟ್ ಅಂತ ಹೇಳಿದ್ದರು ಎಂದ ಮೊಯಿದ್ದೀನ್ ಬಾವ, ಯಾವುದೇ ಪ್ರಭಾವ ಇಲ್ಲದೇ ಟಿಕೆಟ್ ಕೊಡೋದಾಗಿ ಹೇಳಿದ್ದರು. ಸಿಇಸಿ ಚೇರ್ ಮೆನ್ ಮೋಹನ್ ಪ್ರಕಾಶ್ ಸಮೀಕ್ಷೆ ರಿಪೋರ್ಟ್ ನನಗೆ ತೋರಿಸಿದ್ದರು. 78% ಜನರು ನನಗೆ ಆಶೀರ್ವಾದ ಮಾಡಿದ್ದರು, 7% ಈಗಿನ ಅಭ್ಯರ್ಥಿ ಪರ ಇತ್ತು. ಹೀಗಾಗಿ ಮೋಹನ್ ಪ್ರಕಾಶ್ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡಿ ಅಂದಿದ್ರು. ಆದರೆ ರಾಹುಲ್ ಗಾಂಧಿ ಕೋಲಾರಕ್ಕೆ ಬಂದಾಗ ಮತ್ತೆ ಇನಾಯತ್ ಆಲಿ ಲಾಬಿ ಮಾಡಿದರೂ ರಾಹುಲ್ ಗಾಂಧಿ ಗಮನ ಕೊಟ್ಟಿಲ್ಲ. ಇದಾದ ಬಳಿಕ ಡಿಕೆಶಿಯವರು ಖರ್ಗೆ ಅವರ ಜೊತೆ ಹೋಗಿ ನನ್ನ ಹೆಸರು ತಡೆದಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇನ್ನು, ಇನಾಯತ್ ಆಲಿ ಎರಡು ಕೋಟಿ ರೂ. ನ್ಯಾಷನಲ್ ಹೆರಾಲ್ಡ್​ಗೆ ಕೊಟ್ಟಿದ್ದಾರಂತೆ. ಇದನ್ನು ಡಿಕೆಶಿ ಸಿಇಸಿ ಸಭೆಯಲ್ಲಿ ರಾಹುಲ್ ಗಾಂಧಿ ಎದುರಲ್ಲೇ ಹೇಳಿದ್ದಾರೆ ಎಂದ ಮೊಯಿದ್ದೀನ್ ಬಾವ, ಕರಾವಳಿ ಭಾಗದ ಕೆಲವರು ವ್ಯವಸ್ಥೆ ಮಾಡಿ ನನ್ನ ಟಿಕೆಟ್ ತಪ್ಪಿಸಿದ್ದಾರೆ. ಏಕೈಕ ಶಾಸಕರಾಗಿ ಮೆರೆಯಬೇಕೆಂಬ ವ್ಯಕ್ತಿ ಟಿಕೆಟ್ ತಪ್ಪಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದ ಮೊಯಿದ್ದೀನ್ ಬಾವ, ಕಾರ್ಯಕರ್ತರ ಒತ್ತಾಯದ ಹಿನ್ನೆಲೆ ನಾನು ಜೆಡಿಎಸ್ ಸೇರುತ್ತಿದ್ದೇನೆ. ಮಾನ್ಯ ಕುಮಾರಣ್ಣ ಮತ್ತು ದೇವೇಗೌಡರ ಆಶೀರ್ವಾದ ನನಗೆ ಇದೆ. ಇಂದು ಮಂಗಳೂರು ಉತ್ತರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸ್ತೇನೆ ಎಂದು ಹೇಳಿದ್ದಾರೆ. ರಾತ್ರಿ ಎರಡು ಗಂಟೆಯವರೆಗೆ ಖರ್ಗೆಯವರ ಮನೆ ಬಳಿ ಇದ್ದರೂ ಏನೂ ಪ್ರಯೋಜನವಾಗಿಲ್ಲ, ಜನಾರ್ದನ ಪೂಜಾರಿ, ವೀರಪ್ಪ ಮೊಯಿಲಿ ಇದ್ದಾಗ ಎಲ್ಲಾ ಸರಿ ಇತ್ತು. ಏಕಾಂಕಿಯಾಗಿ ಶಾಸಕನಾಗಬೇಕು ಎಂಬ ವ್ಯಕ್ತಿ ಟಿಕೆಟ್ ತಪ್ಪಿಸಿದ್ದಾರೆ. ಯುಟಿ ಖಾದರ್‌ಗೆ ನಾನು ಸರ್ವೇ ಪ್ರಕಾರ ಟಿಕೆಟ್ ಕೊಡಿ ಅಂತ ಕೋರಿಕೊಂಡೆ, ಆದರೆ ಅವರು ನನ್ನ ಪರವಾಗಿ ನಿಲ್ಲಲೇ ಇಲ್ಲ ಎಂದು ಕಿಡಿಕಾರಿದರು.

suddiyaana