ಸೇಫ್ ಆಗಿ ಭೂಮಿಗೆ ಲ್ಯಾಂಡ್ ಆದ ಸುನಿತಾ ವಿಲಿಯಮ್ಸ್ – ನುಡಿದಂತೆ ನಡೆದಿದ್ದೇವೆ ಎಂದ ಟ್ರಂಪ್!

ಕಳೆದ 9 ತಿಂಗಳಿನಿಂದ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದ ಸುನಿತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಕಡೆಗೂ ಭೂಮಿಗೆ ವಾಪಾಸ್ ಬಂದಿದ್ದಾರೆ. ಇದೀಗ ಸುನಿತಾ ವಿಲಿಯಮ್ಸ್ ಹಾಗೂ ಬಚ್ ಮೋರ್ ಸುರಕ್ಷಿತವಾಗಿ ಲ್ಯಾಂಡ್ ಆಗ್ತಿದ್ದಂತೆ ಯುಎಸ್ನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಾವು ನುಡಿದಂತೆ ನಡೆದಿದ್ದೇವೆ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ಭೂಮಿಗೆ ಬಂದ ಸುನೀತಾ ವಿಲಿಯಮ್ಸ್ ತಂಡ – ಗಗನಯಾತ್ರಿಗಳಿಗೆ ವೈದ್ಯರ ತಂಡ ಆರೋಗ್ಯ ತಪಾಸಣೆ
ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬರೋಬ್ಬರಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಸಿಲುಕಿಕೊಂಡ ಬೆನ್ನಲ್ಲೇ ಇದು ರಾಜಕೀಯವಾಗಿಯೂ ಕೂಡ ಅಮೆರಿಕಾದಲ್ಲಿ ಚರ್ಚೆಗೆ ಬಂದಿತ್ತು. ಜಾಗತಿಕವಾಗಿಯೂ ಕೂಡ ಪರ ವಿರೋಧಗಳ ಮಾತುಗಳು ಕೇಳಿ ಬಂದಿದ್ದವು. ಆದ್ರೆ ಟ್ರಂಪ್ ಅಧಿಕಾರವಹಿಸಿಕೊಂಡ ಎರಡೇ ತಿಂಗಳಿಗೆ ಈಗ ಗಗನಯಾನಿಗಳು ಸುರಕ್ಷಿತವಾಗಿ ವಾಪಸ್ ಬಂದಿದ್ದಾರೆ. ಸ್ಪೇಸ್ ಎಕ್ಸ್ನ ಕ್ರ್ಯೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ಮೂಲಕ ವಿಲಿಯಮ್ಸ್ ಹಾಗೂ ವಿಲ್ಮೋರ್ರನ್ನು ಭೂಮಿಗೆ ಮರಳಿ ತಂದಿದ್ದು. ಸುಮಾರು 3.30ಕ್ಕೆ ಫ್ಲೋರಿಡಾದ ಕರಾವಳಿ ತೀರದಲ್ಲಿ ಇಬ್ಬರು ಗಗನಯಾತ್ರಿಗಳು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದಾರೆ ಎಂದು ವೈಟ್ಹೌಸ್ ಟ್ವೀಟ್ ಮಾಡಿದೆ
ವೈಟ್ಹೌಸ್ನ ಅಧಿಕೃತ ಎಕ್ಸ್ ಖಾತೆಯಲ್ಲಿ, ಗಗನಯಾತ್ರಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರುವುದಾಗಿ ನಾವು ಭರವಸೆ ಕೊಟ್ಟಿದ್ದೇವು. ಆ ಭರವಸೆಯನ್ನು ಈಡೇರಿಸಿದ್ದೇವೆ. ನಮ್ಮ ಅಧ್ಯಕ್ಷ ಟ್ರಂಪ್ ಗಗನಯಾತ್ರಿಗಳನ್ನು ರಕ್ಷಿಸುವುದಾಗಿ ವಾಗ್ದಾನ ಮಾಡಿದ್ದರು ಅದರಂತೆ 9 ತಿಂಗಳುಗಳ ಬಳಿಕ ಅವರನ್ನು ರಕ್ಷಿಸಲಾಗಿದೆ ಇಂದು ಗಗನಯಾನಿಗಳು ಗಲ್ಫ್ ಆಫ್ ಅಮೆರಿಕಾದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದಾರೆ ಎಂದು ಹೇಳಿದೆ.
ಇನ್ನು ಇದೇ ವಿಚಾರವಾಗಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಾಸಾಗೆ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು ಸ್ಪೇಸ್ ಎಕ್ಸ್ನ ಮುಖ್ಯಸ್ಥರಾಗಿರುವ ಎಲಾನ್ ಮಸ್ಕ್, ಸ್ಪೇಸ್ ಎಕ್ಸ್ ಹಾಗೂ ನಾಸಾಗೆ ಅಭಿನಂದನೆ ಸಲ್ಲಿಸಿದ್ದಾರೆ. ಸ್ಪೇಸ್ ಎಕ್ಸ್ ಮತ್ತು ನಾಸಾ ಗಗನಯಾನಿಗಳ ಮತ್ತೊಂದು ಸುರಕ್ಷಿತವಾಗಿ ಕರೆತರುವಲ್ಲಿ ಯಶಸ್ವಿಯಾಗಿವೆ ಅಭಿನಂದನೆಗಳು ಎಂದು ಹೇಳಿದ್ದಾರೆ.