ಸತೀಶ್ ಜಾರಕಿಹೊಳಿ ಕುಟುಂಬಕ್ಕೆ ಇಡಿ ಶಾಕ್! – ಮನೆ ಹಾಗೂ ಹಲವು ಸ್ಥಳದ ಮೇಲೆ ಇಡಿ ರೈಡ್

ಸತೀಶ್ ಜಾರಕಿಹೊಳಿ ಕುಟುಂಬಕ್ಕೆ ಇಡಿ ಶಾಕ್! –  ಮನೆ ಹಾಗೂ ಹಲವು ಸ್ಥಳದ ಮೇಲೆ ಇಡಿ ರೈಡ್

ಕರ್ನಾಟಕದ ರಾಜಕೀಯ ವಲಯದಲ್ಲಿ ಇಂದು ಬೆಳಗ್ಗೆಯಿಂದಲೇ ಸಂಚಲನ ಮೂಡಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ.

ಸೆಪ್ಟೆಂಬರ್ 9ರ ಮುಂಜಾನೆಯಿಂದ ಬೆಂಗಳೂರು, ಬೆಳಗಾವಿ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸವೂ ಇಡಿ ಪರಿಶೀಲನೆಯ ವ್ಯಾಪ್ತಿಗೆ ಬಂದಿದೆ. ಒಟ್ಟು ಸುಮಾರು 18 ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಇದನ್ನೂ ಓದಿ: ದೆಹಲಿ ಪಿಜಿ ದುರಂತದ ಬಗ್ಗೆ ಸಿಡಿದೆದ್ದ ಕಾಕ್ರೋಚ್ ಪಾರ್ಟಿ – ಮೃತರ ಕುಟುಂಬಗಳಿಗೆ ₹1 ಕೋಟಿ ಪರಿಹಾರಕ್ಕೆ ಆಗ್ರಹ

ಈ ಕಾರ್ಯಾಚರಣೆ ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಯ ಭಾಗವಾಗಿದೆ ಎಂದು ವರದಿಗಳು ತಿಳಿಸಿವೆ. ಅಬಕಾರಿ ಇಲಾಖೆಗೆ ಸಂಬಂಧಿಸಿದ ಅಕ್ರಮಗಳ ಪ್ರಕರಣದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂಬ ವರದಿಗಳೂ ಬಂದಿವೆ. ಆದರೆ ಇಡಿ ಅಧಿಕಾರಿಗಳು ಈವರೆಗೆ ದಾಳಿಯಲ್ಲಿ ಏನು ಪತ್ತೆಯಾಗಿದೆ ಅಥವಾ ಎಷ್ಟು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂಬ ಬಗ್ಗೆ ಅಧಿಕೃತವಾಗಿ ಸಂಪೂರ್ಣ ಮಾಹಿತಿ ಬಹಿರಂಗಪಡಿಸಿಲ್ಲ.

ಮುಖ್ಯವಾಗಿ, ಈ ದಾಳಿ ಸತೀಶ್ ಜಾರಕಿಹೊಳಿ ಅವರಿಗಷ್ಟೇ ಸೀಮಿತವಾಗಿಲ್ಲ. ಅವರ ಪುತ್ರಿ ಹಾಗೂ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದೀಗ ಇಡಿ ಅಧಿಕಾರಿಗಳ ಶೋಧ ಪೂರ್ಣಗೊಂಡ ಬಳಿಕ ಯಾವ ದಾಖಲೆಗಳು ಸಿಕ್ಕಿವೆ? ಪ್ರಕರಣದ ಮುಂದಿನ ಹಂತ ಏನು? ಎಂಬುದು ಕುತೂಹಲ ಮೂಡಿಸಿದೆ. ಈ ದಾಳಿಯಿಂದ ರಾಜ್ಯ ರಾಜಕೀಯದಲ್ಲೂ ಭಾರೀ ಚರ್ಚೆ ಶುರುವಾಗಿದೆ.

Kishor KV

Leave a Reply

Your email address will not be published. Required fields are marked *