ಒಂದು ವಾರದ ವಿಳಂಬದ ಬಳಿಕ ಕೇರಳಕ್ಕೆ ಮಾನ್ಸೂನ್ ಎಂಟ್ರಿ – ಕೆಲವೇ ಗಂಟೆಗಳಲ್ಲಿ ಕರ್ನಾಟಕಕ್ಕೆ ಪ್ರವೇಶ

ಒಂದು ವಾರದ ವಿಳಂಬದ ಬಳಿಕ ಕೇರಳಕ್ಕೆ ಮಾನ್ಸೂನ್ ಎಂಟ್ರಿ – ಕೆಲವೇ ಗಂಟೆಗಳಲ್ಲಿ ಕರ್ನಾಟಕಕ್ಕೆ ಪ್ರವೇಶ

ಒಂದು ವಾರದ ವಿಳಂಬದ ಬಳಿಕ ಕೇರಳಕ್ಕೆ ಮಾನ್ಸೂನ್ ಎಂಟ್ರಿಕೊಟ್ಟಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಕರ್ನಾಟಕ ಹಾಗೂ ತಮಿಳುನಾಡಿಗೂ ಈ ಮಾರುತಗಳು ಪ್ರವೇಶ ಪಡೆಯಲಿದೆ. ಗಾಳಿಯ ವೇಗ ಮತ್ತು ಪರಿಸ್ಥಿತಿಗಳು ಸರಿಯಾಗಿದ್ದರೆ ದಕ್ಷಿಣದಿಂದ ಉತ್ತರಕ್ಕೆ ಅತ್ಯಂತ ವೇಗವಾಗಿ ಚಲಿಸುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕರಾವಳಿಯಲ್ಲಿ 31 ವರ್ಷಗಳ ನಂತರ ಜಲಕ್ಷಾಮ..! – ಕಟೀಲು ಕ್ಷೇತ್ರದಲ್ಲೂ ನೀರಿಗೆ ಬರ..!

ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರ ಹೊತ್ತಿಗೆ ದೇಶಕ್ಕೆ ಪ್ರವೇಶ ಪಡೆಯುತ್ತದೆ. ಆದರೆ, ಈ ಬಾರಿ ಜೂನ್ 4 ರಂದು ಮಾನ್ಸೂನ್ ಕೇರಳವನ್ನು ತಲುಪಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳೀತ್ತು. ಆದರೆ, ಅರಬ್ಬಿ ಸಮುದ್ರದಲ್ಲಿ ಉಂಟಾರ ಬೀಪರ್ಜಾಯ್ ಚಂಡಮಾರುತವು ಮಾನ್ಸೂನ್ ಮಾರುತದ ಮಾರ್ಗವನ್ನು ನಿರ್ಬಂಧ ಮಾಡಿತ್ತು. ಆದರೆ, ಬೀಪರ್ಜಾಯ್ ಚಂಡಮಾರುತವೀಗ ಸಣ್ಣ ಪಥ ಬದಲಾವಣೆ ಮಾಡಿದೆ. ಇದರಿಂದಾಗಿ ಕೇರಳದ ಕಡೆಗೆ ಮಾನ್ಸೂನ್ ಮಾರುತಗಳು ತಿರುಗಿವೆ. ಕೇರಳದ ಕೊಚ್ಚಿಯಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ತಾಪಮಾನದಲ್ಲೂ ದೊಡ್ಡ ಪ್ರಮಾಣದ ಇಳಿಕೆಯಾಗಿದೆ. ಇನ್ನು ಕೇರಳದ ತಿರುವನಂತಪುರದಲ್ಲೂ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ತಮಿಳುನಾಡು, ಕರ್ನಾಟಕ, ಮತ್ತು ನೈಋತ್ಯ, ಮಧ್ಯ, ಈಶಾನ್ಯ ಬಂಗಾಳ ಕೊಲ್ಲಿ, ಈಶಾನ್ಯ ರಾಜ್ಯಗಳು ಮತ್ತು ಕೇರಳದ ಉಳಿದ ಭಾಗಗಳಲ್ಲಿ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಐಎಂಡಿ ತಿಳಿಸಿದೆ.

suddiyaana