ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ: ಶಾಲಾ ಕಾಲೇಜುಗಳಿಗೆ ರಜೆ – ವರುಣನ ಆರ್ಭಟಕ್ಕೆ ಮಂಗಳೂರಲ್ಲಿ ಮೊದಲ ಬಲಿ

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ: ಶಾಲಾ ಕಾಲೇಜುಗಳಿಗೆ ರಜೆ – ವರುಣನ ಆರ್ಭಟಕ್ಕೆ ಮಂಗಳೂರಲ್ಲಿ ಮೊದಲ ಬಲಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದ್ದು, ಭಾರಿ ಮಳೆಯಾಗುತ್ತಿದೆ. ಮುಂಜಾಗೃತ ಕ್ರಮವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಮಳೆ ಆರ್ಭಟ ಜೋರಾದ ಮೇಲೆ ರಸ್ತೆಯಲ್ಲಿ ಬ್ಯಾರಿಕೇಡ್ – ಕೊಡಗಿನಲ್ಲಿ ಹೆದ್ದಾರಿ ಕುಸಿಯದಂತೆ ತಡೆಯಲು ಇಷ್ಟು ಮಾಡಿದರೆ ಸಾಕಾ?

ಕಳೆದೆರಡು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮೋರಿ‌ ದಾಟುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ಮಂಗಳೂರಿನ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ಮನೆ ಸಮೀಪದ ಮೋರಿ‌ ದಾಟುವ ಸಂದರ್ಭ ಸುರೇಶ್ ಗಟ್ಟಿ‌(52 ವರ್ಷ) ಎಂಬುವವರು ಆಯತಪ್ಪಿ ಬಿದ್ದು ಮಳೆ ನೀರಿ ಕೊಚ್ಚಿ ಹೋಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

suddiyaana