ಇನ್ನೂ ಮೂರು ದಿನ ರಾಜ್ಯಾದ್ಯಂತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ರಾಜಧಾನಿಯಲ್ಲಿ ತುಂತುರು ಮಳೆ ಚುಮು ಚುಮು ಚಳಿ

ಇನ್ನೂ ಮೂರು ದಿನ ರಾಜ್ಯಾದ್ಯಂತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆರಾಜಧಾನಿಯಲ್ಲಿ ತುಂತುರು ಮಳೆ ಚುಮು ಚುಮು ಚಳಿ

ರಾಜ್ಯದಲ್ಲಿ ಇನ್ನೇನು ಚಳಿಗಾಲ ಕಾಲಿಟ್ಟಿತು ಅನ್ನೋವಷ್ಟರಲ್ಲಿ ಮಳೆ ಕಾಟ ಶುರುವಾಗಿದೆ. ಶುಕ್ರವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮೋಡ ಕವಿದ ವಾತಾವರಣ ಇದ್ದು, ತುಂತುರು ಮಳೆಹನಿ ಸುರಿಯುತ್ತಿದೆ. ಶನಿವಾರ ಬೆಳಗ್ಗೆಯಿಂದಲೇ ತುಂತುರು ಮಳೆ ಹನಿ ಜೊತೆ ಚುಮು ಚುಮು ಚಳಿ ಕಂಡುಬಂದಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳಿಗೆ ಬಿಡುಗಡೆ ಭಾಗ್ಯ?

ಇಂದು ಮತ್ತು ನಾಳೆ ಕರಾವಳಿಯ ಹಲವು ಕಡೆ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ 13, 14, 15ರಂದು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಎರಡು, ಮೂರು ದಿನ ಸಾಧಾರಣ ಮಳೆಯಾಗಲಿದ್ದು, ಬೆಳಗ್ಗೆ ದಟ್ಟ ಮಂಜು ಕವಿದ ವಾತಾವಾರಣದಿಂದ ಕೂಡಿರಲಿದೆ. ಕರಾವಳಿ ಸೇರಿದಂತೆ ಹಲವೆಡೆ ಭತ್ತ ಕಟಾವಿಗೆ ಬಂದಿದ್ದು, ಅತ್ತ ಬಿಸಿಲೂ ಇಲ್ಲದೆ, ಇತ್ತ ಕಟಾವು ಮಾಡಲಾಗದೇ ರೈತರು ಪರಿತಪಿಸುವಂತಾಗಿದೆ.

suddiyaana