ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ತಾಪಮಾನ – ಬೆಂಗಳೂರಿನಲ್ಲಿ ಇನ್ನಷ್ಟು ಬಿಸಿಗಾಳಿ ಹೆಚ್ಚಳ ಸಾಧ್ಯತೆ!

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ತಾಪಮಾನ – ಬೆಂಗಳೂರಿನಲ್ಲಿ ಇನ್ನಷ್ಟು ಬಿಸಿಗಾಳಿ ಹೆಚ್ಚಳ ಸಾಧ್ಯತೆ!

ಈ ವರ್ಷ ಬಿಸಿಲ ಬೇಗೆ ಜೋರಾಗಿದೆ. ತಾಪಮಾನ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ಬಿಸಿಗಾಳಿ ಬೀಸುತ್ತಿದೆ. ಕರ್ನಾಟಕದಲ್ಲೂ ಬಿಸಿಗಾಳಿ ಹೆಚ್ಚಾಗಿದೆ. ಇದರ ಎಫೆಕ್ಟ್‌ ಸಿಲಿಕಾನ್‌ ಸಿಟಿ ಬೆಂಗಳೂರಿಗೂ ತಟ್ಟಲಿದೆ.

ಹೌದು, ಒಂದ್ಕಡೆ ನೀರಿಗಾಗಿ ಹಾಹಾಕಾರ ಶುರುವಾಗಿದ್ದರೆ, ಮತ್ತೊಂದ್ಕಡೆ ಬಿಸಿಲಿನ ಝಳ ಹೆಚ್ಚಾಗಿದೆ. ತಾಪಮಾನ ಏರಿಕೆಯಿಂದಾಗಿ ಜನರು ಬಳಲಿ ಬೆಂಡಾಗಿ ಹೋಗಿದ್ದಾರೆ. ಈ ಮಧ್ಯೆಯೇ ಹವಾಮಾನ ಇಲಾಖೆ ಆಘಾತಕಾರಿ ಮಾಹಿತಿ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಬಿಸಿಗಾಳಿ ಹೆಚ್ಚಳವಾಗಲಿದೆ. ಈ ಬಾರಿ ಬೆಂಗಳೂರಿಗೆ 2 ರಿಂದ 5 ದಿನಗಳವರೆಗೆ ಬಿಸಿಗಾಳಿಯ ಎಫೆಕ್ಟ್ ತಟ್ಟಲಿದೆ. ಇನ್ನು ಒಂದು ವಾರಗಳ ಕಾಲ ಅಲರ್ಟ್ ಆಗಿರುವಂತೆ ಹವಾಮಾನ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೈಗೆ ಏನಾಗಿದೆ? – ಆತಂಕದಲ್ಲಿ ಫ್ಯಾನ್ಸ್‌

ಏಪ್ರಿಲ್​​ನಲ್ಲಿ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿಯ ಎಫೆಕ್ಟ್ ತಟ್ಟುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಿಗೆ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದ್ದು, ಗರಿಷ್ಠ ತಾಪಮಾನ ಮಾತ್ರ ಅಲ್ಲದೇ ಕನಿಷ್ಠ ತಾಪಮಾನದಲ್ಲೂ ಏರಿಕೆಯಾಗುವ ಸಾಧ್ಯತೆ ಇದೆ. ಇಂದು 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡುಬಂದಿದ್ದು, ನಾಳೆ ಬರೋಬ್ಬರಿ 38 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು ಮತ್ತಷ್ಟು ಹಾಟ್ ಆಗಲಿದೆ. ಹೀಗಾಗಿ ಹೈ ಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ದೇಹದ ಉಷ್ಣತೆಯು 40 C ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ.

ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟೋಕ್ ಕೂಡ ಸಾಧ್ಯತೆ ಇದ್ದು, ಇದು ಜೀವಕ್ಕೆ ಕುತ್ತು ತರುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಕೆಲವು ದಿನ ತಾಪಮಾನ ಇಳಿಕೆಯವರೆಗೂ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದೆ ಇರುವಂತೆ ಆರೋಗ್ಯ ಇಲಾಖೆಯಿಂದ ಸಲಹೆ ನೀಡಿದ್ದು ವೈದ್ಯರು ಕೆಲವು ಸಲಹೆ ನೀಡಿದ್ದಾರೆ.

Shwetha M