ಬೆಂಗಳೂರಲ್ಲಿ ಮೆಟ್ರೋ ಕಾಮಗಾರಿಗೆ ಎರಡು ಬಲಿ – ತಾಯಿ ಮಗುವಿನ ದಾರುಣ ಸಾವು

ಬೆಂಗಳೂರಲ್ಲಿ ಮೆಟ್ರೋ ಕಾಮಗಾರಿಗೆ ಎರಡು ಬಲಿ – ತಾಯಿ ಮಗುವಿನ ದಾರುಣ ಸಾವು

ಬೆಂಗಳೂರು : ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ನ ಕಬ್ಬಿಣದ ರಾಡ್‌ಗಳು ಬೈಕ್ ಮೇಲೆ ಬಿದ್ದ ಪರಿಣಾಮ ತಾಯಿ ಮತ್ತು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ 10:30 ರ ಸುಮಾರಿಗೆ ಈ ದುರಂತ ಸಂಭವಿಸಿದೆ. 28 ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಸಾವನ್ನಪ್ಪಿದ ದುರ್ದೈವಿಗಳು. ಗಂಭೀರ ಸ್ಥಿತಿಯಲ್ಲಿರುವ ಮತ್ತೊಂದು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ತೇಜಸ್ವಿನಿ ಪತಿ ಅಪಾಯದಿಂದ ಪಾರಾಗಿದ್ದಾರೆ. ಕಲ್ಯಾಣ್ ನಗರದಿಂದ ಹೆಚ್‌ಆರ್‌ಬಿಆರ್ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾಗುತ್ತಿದ್ದ ಮೆಟ್ರೊ ರೈಲ್ವೆ ಪಿಲ್ಲರ್‌ನ ಲೋಹದ ರಾಡ್​ಗಳು ರಸ್ತೆ ಮೇಲೆ ಕುಸಿದು ಬಿದ್ದಿದ್ದರಿಂದ ಘಟನೆ ನಡೆದಿದೆ. ಬೆಂಗಳೂರಿನ ಕಲ್ಯಾಣ್‌ನಗರದಿಂದ ಎಚ್‌ಆರ್‌ಬಿಆರ್‌ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ನಿರ್ಮಾಣವಾಗುತ್ತಿದ್ದ ಮೆಟ್ರೊ ರೈಲು ಪಿಲ್ಲರ್‌ ಕುಸಿದು ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿ, ಆತನ ಪತ್ನಿ ಹಾಗೂ ಅವರ ಇಬ್ಬರು ಪುತ್ರರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ದುರಾದೃಷ್ಟವಶಾತ್ ತಾಯಿ ಮತ್ತು ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ:  ಸಿಲಿಕಾನ್ ಸಿಟಿಯಲ್ಲಿ ಚಳಿ ಚಳಿ – ರಾಜ್ಯದ ಹಲವೆಡೆ ಬೀಸಲಿದೆ ಶೀತಗಾಳಿ

ಬಿಎಂಆರ್‌ಸಿಎಲ್ ನಿರ್ಲಕ್ಷ್ಯಕ್ಕೆ ಎರಡು ಅಮಾಯಕ ಜೀವ ಬಲಿಯಾಗಿದ್ದಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಇನ್ಯಾರನ್ನೋ ಬಲಿ ಪಡೆದ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ನಾಗವಾರ – ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಮಾರ್ಗ ಕಾಮಗಾರಿ ನಡೆಯುತ್ತಿತ್ತು. ಕೆಲ ಸಮಯ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಕೂಡಾ ಉಂಟಾಗಿತ್ತು. ಮೂರು ಗ್ಯಾಸ್ ಕಿಟ್ ಬಳಸಿ ಪಿಲ್ಲರ್‌ಗಳ ತೆರವು ಕಾರ್ಯಾಚರಣೆ ಸಾಗುತ್ತಿದೆ.

suddiyaana