ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಹೃದಯಾಘಾತದಿಂದ ನಿಧನ

ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಹೃದಯಾಘಾತದಿಂದ ನಿಧನ

ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಸಾಹಸ ನಿರ್ದೇಶನ ಮಾಡಿದ್ದ ಜಾಲಿ ಬಾಸ್ಟಿನ್ ಹಠಾತ್ ಹೃದಯಘಾತದಿಂದ ಮಂಗಳವಾರ (ಡಿಸೆಂಬರ್ 26) ನಿಧನ ಹೊಂದಿದ್ದಾರೆ.

ಜಾಲಿ ಬಾಸ್ಟಿನ್  ಅವರು ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಚಿತ್ರಗಳಿಗೆ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿದ್ದು, ಅವರು ಬಹುಬೇಡಿಕೆ ಸ್ಟಂಟ್ ಮಾಸ್ಟರ್ ಆಗಿದ್ದರು. ‘ಪ್ರೇಮಲೋಕ’, ‘ಮಾಸ್ಟರ್​ ಪೀಸ್’ ಸೇರಿ ನೂರಾರು ಸಿನಿಮಾಗಳಿಗೆ ಅವರು ಸ್ಟಂಟ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ:ಹೊಸ ವರ್ಷಾಚರಣೆಯಂದು ನಂದಿ ಬೆಟ್ಟಕ್ಕೆ ನೋ ಎಂಟ್ರಿ! – ಡಿ. 31, ಜ.1 ರಂದು ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ ಜಿಲ್ಲಾಡಳಿತ! 

ಜಾಲಿ ಅವರು ಹುಟ್ಟಿದ್ದು 1966ರಲ್ಲಿ. ಕೇರಳದ ಅಲೆಪ್ಪೆಯಲ್ಲಿ ಅವರು ಜನನ ಆಯಿತು. ಆದರೆ, ಅವರು ಬೆಳೆದಿದ್ದು ಬೆಂಗಳೂರಿನಲ್ಲಿ. ಅವರು ಬೆಂಗಳೂರಿನಲ್ಲೇ ಶಿಕ್ಷಣ ಪಡೆದರು. ಬೈಕ್ ಮೆಕಾನಿಕ್ ಆಗಿ ಜಾಲಿ ಬಾಸ್ಟಿನ್ ವೃತ್ತಿ ಆರಂಭಿಸಿದರು. ಅವರನ್ನು ಗುರುತಿಸಿದ ಕೆಲವರು ಸ್ಟಂಟ್​ಮನ್ ಆಗಿ ಚಿತ್ರರಂಗಕ್ಕೆ ಪರಿಚಯಿಸಿದರು. ‘ಸಾಹಸ ಕಲಾವಿದನಾಗಿ, ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ ಜಾಲಿ ಅವರು ಈವರೆಗೆ 900ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ‘ನಿನಗಾಗಿ ಕಾದಿರುವೆ’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟರು. ಒಂದು ಕಾಲಕ್ಕೆ ಅತಿಹೆಚ್ಚು ಸಂಭಾವನೆ ಪಡೆಯೋ ಸಾಹಸ ನಿರ್ದೇಶಕ ಎಂಬ ಹೆಗ್ಗಳಿಕೆ ಅವರಿಗೆ ಇತ್ತು. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ಸಾಹಸ ನಿರ್ದೇಶಕನಾಗಿ ಜಾಲಿ ಬಾಸ್ಟಿನ್ ಹೆಸರು ಮಾಡಿದ್ದರು.

‘ಪ್ರೇಮಲೋಕ’, ‘ಪುಟ್ನಂಜ’, ‘ಅಣ್ಣಯ್ಯ’, ‘ಶಾಂತಿ ಕ್ರಾಂತಿ’ ಸೇರಿದಂತೆ ರವಿಚಂದ್ರನ್ ನಟನೆಯ ಹಲವಾರು ಸಿನಿಮಾಗಳಲ್ಲಿ ಜಾಲಿ ಕೆಲಸ ಮಾಡಿದ್ದಾರೆ. ರಿಸ್ಕಿ ಸ್ಟಂಟ್ ಮಾಡೋ ವೇಳೆ ಸಾಕಷ್ಟು ಬಾರಿ ಜಾಲಿ ಬಾಸ್ಟಿನ್ ಪೆಟ್ಟು ಮಾಡಿಕೊಂಡಿದ್ದರು. ‘ಭಲೇ ಚತುರ’ ಸಿನಿಮಾದ ಬಾಂಬ್ ಬ್ಲಾಸ್ಟ್ ದೃಶ್ಯದ ವೇಳೆ ಜಾಲಿ ದೇಹಕ್ಕೆ ಸಾಕಷ್ಟು ಹಾನಿ ಆಗಿತ್ತು. ‘ಪುಟ್ನಂಜ’ ಸಿನಿಮಾ ಶೂಟ್ ವೇಳೆ ಬೈಕ್​ನಿಂದ ಬಿದ್ದು ಅವರ ಮುಖ ಹಾಗೂ ಕಾಲಿಗೆ ಪೆಟ್ಟಾಗಿತ್ತು.

Shwetha M