‘ಯದುವೀರ್ ಯಾವ ರಾಜ ರೀ..?’ – ಸಿಎಂ ಸಿದ್ಧರಾಮಯ್ಯ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ!

‘ಯದುವೀರ್ ಯಾವ ರಾಜ ರೀ..?’ – ಸಿಎಂ ಸಿದ್ಧರಾಮಯ್ಯ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಲೋಕಸಭಾ ಪ್ರಚಾರದ ಕಣ ರಂಗೇರಿದೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಒಡೆಯರ್ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ವಿಶೇಷ ಅಂದ್ರೆ ಮೈಸೂರು ಟಿಕೆಟ್ ವಂಚಿತ, ಹಾಲಿ ಸಂಸದ ಪ್ರತಾಪ್ ಸಿಂಹ ಅವರ ಜೊತೆಯೇ ಯದುವೀರ್ ಮತಬೇಟೆಗೆ ಇಳಿದಿದ್ದಾರೆ. ಇದೀಗ ‘ಯದುವೀರ್ ಯಾವ ರಾಜ ರೀ..?’ ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ದಶಕ ಕಳೆದರೂ ಕೈಗೆ ಬಂದಿಲ್ಲ ಕಪ್..! – ನಾಲ್ಕು ಫ್ರಾಂಚೈಸಿಗಳು ಒಂದೇ ಒಂದು ಬಾರಿ ಟೂರ್ನಿಯನ್ನ ಗೆದ್ದೇ ಇಲ್ಲ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್‌ ಸಿಂಹ, ಸ್ವಾತಂತ್ರ್ಯ ಬಂದ ನಂತರ ಸಂವಿಧಾನ ಜಾರಿಯಾದ ದಿನದಿಂದ ರಾಜ, ಮಹಾರಾಜ ಎಂಬುವುದಿಲ್ಲ. ಇದರಲ್ಲಿ ಹುಳುಕು ಹುಡುಕುವುದು ತಪ್ಪು. ಯದುವೀರ್ ಬಿಜೆಪಿ ಅಭ್ಯರ್ಥಿ, ನಾನು ಕೂಡ ಅವತ್ತು ಹೇಳಿಕೆ ಕೊಡುವಾಗ ಅವರು ಪ್ರಜಾ ಪ್ರತಿನಿಧಿಯಾಗಿರಬೇಕು ಅಂತಾ ಅವತ್ತೇ ಹೇಳಿದ್ದೆ. ಯದುವೀರ್ ಪ್ರಜಾ ಪ್ರತಿನಿಧಿಯಾಗಲು ಬಂದಿದ್ದಾರೆ  ಎಂದು ಹೇಳಿದ್ದಾರೆ.

ನನಗೆ ಸಿಎಂ ಹೇಳಿಕೆ ಹುಳುಕು ಅನ್ನಿಸುತ್ತಿಲ್ಲ. ಸಿಎಂ ಹೇಳಿರುವುದರಲ್ಲಿ ತಪ್ಪಿಲ್ಲ. ದೇಶದಲ್ಲಿ ರಾಜಾಡಳಿತ ಇಲ್ಲ. ನವರಾತ್ರಿ ಸಂದರ್ಭದಲ್ಲಿ ಖಾಸಗಿ ದರ್ಬಾರ್ ನಡೆಸುವಾಗ ವಿಧಿ ವಿಧಾನಗಳಿಗೆ ಸೀಮಿತವಾಗಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರನ್ನ ಸೈದ್ಧಾಂತಿಕವಾಗಿ ವಿರೋಧಿಸುತ್ತೇನೆ. ನನಗೂ ಅವರಿಗೂ ಬಹಳಷ್ಟು ವಿರೋಧಗಳಿವೆ. ಮೈಸೂರಿನ ಜನ ಯದುವೀರ್ ಅವರನ್ನ ಮಹಾರಾಜ ಅಂತಾ ಕರೆಯುತ್ತೀರಾ? ಅಥವಾ ಬಿಜೆಪಿ ಅಭ್ಯರ್ಥಿ ಅಂತಾ ಕರೆಯುತ್ತೀರಾ? ಮಹಾರಾಜರು ಅರಮನೆಗೆ ಸೀಮಿತವಾಗಿರದೆ ಜನಪ್ರತಿನಿಧಿಯಾಗಲು ಬಂದಿದ್ದಾರೆ. ಹೀಗಾಗಿ ಸಿಎಂ ಬಿಜೆಪಿ ಅಭ್ಯರ್ಥಿ ಎಂದು ಕರೆದಿರುವುದರಲ್ಲಿ ತಪ್ಪಿಲ್ಲ ಎಂದು ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.

Shwetha M