ಬಿಜೆಪಿ-ಜೆಡಿಎಸ್‌ ಮೈತ್ರಿಗೆ ನನ್ನ ಬೆಂಬಲ! – ಮಂಡ್ಯ ಚುನಾವಣೆಯಿಂದ ಹಿಂದೆ ಸರಿದ ಸುಮಲತಾ

ಬಿಜೆಪಿ-ಜೆಡಿಎಸ್‌ ಮೈತ್ರಿಗೆ ನನ್ನ ಬೆಂಬಲ! – ಮಂಡ್ಯ ಚುನಾವಣೆಯಿಂದ ಹಿಂದೆ ಸರಿದ ಸುಮಲತಾ

ಕಳೆದ ಕೆಲ ದಿನಗಳಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಅಂಬರೀಶ್‌ ಯಾವ ನಿರ್ಧಾರ ಕೈಗೊಳ್ಳಬಹುದು ಎಂಬ ಬಗ್ಗೆ ಕುತೂಹಲ ಗರಿಗೆದರಿತ್ತು. ಇದೀಗ ಎಲ್ಲರ ಕುತೂಹಲಕ್ಕೆ ತೆರೆ ಬಿದ್ದಿದೆ. ಸಂಸದೆ ಸುಮಲತಾ  ಅವರು ತಮ್ಮ ರಾಜಕೀಯ ನಡೆಯ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು  ಸುಮಲತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ಪ್ರಶ್ನಾತೀತ ನಾಯಕ ಸಿದ್ದರಾಮಯ್ಯರ ರಾಜಕೀಯ ಯುಗಾಂತ್ಯ? 

2019ರಲ್ಲಿ ಅದೊಂದು ಬೇರೆ ತರಹದ ಸವಾಲಾಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಮತ್ತೊಂದು ಸವಾಲು ಎದುರಿಸುತ್ತಿದ್ದೇನೆ. ಕೊನೆಗಳಿಗೆವರೆಗೂ ಬಿಜೆಪಿ ಟಿಕೆಟ್ ಉಳಿಸಿಕೊಳ್ಳಲು ಹೋರಾಟ ಮಾಡಿದೆ. ಎಂಪಿ, ಎಂಎಲ್‌ಎಗೆ ಟಿಕೆಟ್‌ ಸಿಗದಿದ್ದರೆ ಅನೇಕರು ಪಕ್ಷ ಬಿಟ್ಟು ಹೋಗುತ್ತಾರೆ. ಎಂಪಿ ಸೀಟ್ ಬಿಟ್ಟುಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ. ಮೋದಿ ಅವರ ಕಾರ್ಯಕ್ಷಮತೆ ಮೆಚ್ಚಿ ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದರು.

ಇನ್ನು ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಿಂತುಕೊಳ್ಳೊಲು ಹೇಳಿದರು. ನನಗೆ ಬೇರೆ ಬೇರೆ ಕ್ಷೇತ್ರದ ಆಫರ್​ ನೀಡಿದರು. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ. ಗೆದ್ದರು, ಸೋತರು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ. ಮಂಡ್ಯ ಮಣ್ಣನ್ನು ಸುಮಲತಾ ಅಂಬರೀಶ್ ಎಂದೆಂದಿಗೂ ಬಿಡಲ್ಲ ಎಂದು ಭಾವನಾತ್ಮಕವಾಗಿ ಸುಮಲತಾ ಪ್ರಮಾಣ ಮಾಡಿದರು.

ಇದಕ್ಕೂ ಮೊದಲು ಬೆಳಗ್ಗೆ 10.30ರ ತನಕ ನಟ ದರ್ಶನ್ ಬರುವುದನ್ನೇ ಕಾದು ಕುಳಿತಿದ್ದ ಸಂಸದೆ ಸುಮಲತಾ ಅಂಬರೀಶ್ ನಂತರ ಪುತ್ರ ಅಭಿಷೇಕ್ ಮತ್ತು ನಟ ದರ್ಶನ್ ಜೊತೆ ಮಂಡ್ಯದ ಕಾಳಿಕಾಂಬ ದೇಗುಲಕ್ಕೆ ಭೇಟಿ ನೀಡಿ ಕಾಳಿಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಇವರ ಜೊತೆಗೆ ಸಿನಿಮಾ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಕೂಡ ಜೊತೆಗಿದ್ದರು. ಸಭೆಯ ಮೊದಲು ಆರಂಭದಲ್ಲಿ ಸುಮಲತಾ ಸಾಧನೆ ಕುರಿತ ‘ನಮ್ಮ ಮಂಡ್ಯ ನಮ್ಮ ಆದ್ಯತೆ’ ಹೆಸರಿನ ಪುಸ್ತಕ ಬಿಡುಗಡೆ ಮಾಡಲಾಯಿತು. ಆ ಬಳಿಕ ಸಂಸದೆಯಾಗಿ ಐದು ವರ್ಷಗಳ ಸಾಧನೆ ಕುರಿತ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಲಾಯಿತು.

Shwetha M