ಮುಡಾ ಕಚೇರಿ ಮೇಲೆ ಇಡಿ ದಾಳಿ – ಸಿಎಂ ಸಿದ್ದರಾಮಯ್ಯಗೆ ಹೆಚ್ಚಾಯ್ತು ಸಂಕಷ್ಟ!
ರಾಜ್ಯದಲ್ಲಿ ಮುಡಾ ಕೇಸ್ ಈಗ ಭಾರಿ ಸದ್ದು ಮಾಡುತ್ತಿದೆ. ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದ್ರಿಂದಾಗಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಲಿದ್ಯಾ ಅನ್ನೋ ಪ್ರಶ್ನೆ ಎಲ್ಲರನ್ನ ಕಾಡುತ್ತಿದೆ.
ಇದನ್ನೂ ಓದಿ: ಭವಾನಿ ರೇವಣ್ಣಗೆ ಬಿಗ್ ರಿಲೀಫ್ – ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ ಕೋರ್ಟ್!
ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಳು ದಾಳಿ ನಡೆಸಿದ್ದಾರೆ. ಆರ್ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.
ಮುಡಾ ಹಗರಣ ಸಂಬಂಧ ಇಡಿ ಸ್ನೇಹಮಯಿ ಕೃಷ್ಣ ಅವರಿಗೆ ಸಮ್ಸನ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಅದರಂತೆ ಸ್ನೇಹಮಯಿ ಕೃಷ್ಣ ಶಾಂತಿನಗರದ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೇ ಹಗರಣ ಸಂಬಂಧ 500 ಪುಟಗಳ ದಾಖೆಯನ್ನು ಇಡಿಗೆ ನೀಡಿದ್ದರು.
ದಾಖಲೆಗಳ ಆಧಾರದ ಮೇಲೆ ಇಡಿ ಇಸಿಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ. ಇದೀಗ ಇಡಿ, ಮುಡಾ ಕಚೇರಿ ಮತ್ತು ಭೂ ಮಾಲೀಕ ದೇವರಾಜು ಮನೆ ಮೇಲೆ ದಾಳಿ ಮಾಡಿದೆ. ಹಗರಣದಲ್ಲಿ ದೇವರಾಜು ಎ4 ಆಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ದೇವರಾಜು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ
ಮುಡಾ ಕಚೇರಿ ಮೇಲೆ ದಾಳಿ ಮಾಡಿರುವ ಇಡಿ ಯಾವುದೇ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರಿಗೆ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡುವ ಸಾಧ್ಯತೆಯೂ ಇದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆಗಿದ್ದಾರೆ.