ಸಿಎಂ ಮುಡಾ ಕೇಸ್ ಕಂಟಕ – ಇಡೀ ದಿನ ಕಾರ್ಯಕ್ರಮ ಕಾಯ್ದಿರಿಸಿದ ಸಿದ್ದರಾಮಯ್ಯ!
ರಾಜ್ಯದಲ್ಲಿ ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೀಗ ಈ ಪ್ರಕರಣ ಸಿಎಂಗೆ ಕಂಟಕವಾಗಿ ಪರಿಣಮಿಸಿದೆ. ಈ ಪ್ರಕರಣ ಸಂಬಂಧ ಸೋಮವಾರ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆ ಇಡೀ ದಿನ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: IPL ಅಖಾಡಕ್ಕಿಳಿಯಲು ಧೋನಿ ರೆಡಿ – ICC 3 ಟ್ರೋಫಿ ಗೆದ್ದ ಏಕೈಕ ಕ್ಯಾಪ್ಟನ್
ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಸೋಮವಾರ ಹೈಕೋರ್ಟ್ ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇಂದು ವಕೀಲರ ಜೊತೆ ಚರ್ಚೆ ಮತ್ತು ಕೋರ್ಟ್ ಕಲಾಪ ಹಿನ್ನೆಲೆಯಲ್ಲಿ ಸಿಎಂ ಯಾವುದೇ ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಂಡಿಲ್ಲ. ನಿಗಧಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ.
ಇನ್ನು ಸೆ. 12ರಂದು ಕೂಡ ಈ ಪ್ರಕರಣ ಸಂಬಂಧ ವಾದ ಸರಣಿ ಮುಂದುವರೆಯಲಿದೆ. ಗುರುವಾರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಹೀಗಾಗಿ ಇಂದು ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗುತ್ತಿದೆ.