ಮುಡಾ ಹಗರಣ ಕೇಸ್‌ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ – ರಿಟ್‌ ಅರ್ಜಿ ವಜಾ ಮಾಡಿದ ಹೈಕೋರ್ಟ್ 

ಮುಡಾ ಹಗರಣ ಕೇಸ್‌ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ – ರಿಟ್‌ ಅರ್ಜಿ ವಜಾ ಮಾಡಿದ ಹೈಕೋರ್ಟ್ 

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಗೆ ಭಾರಿ ಹಿನ್ನಡೆಯಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಇದನ್ನೂ ಓದಿ: ಬಾಂಗ್ಲಾ ಸರಣಿಯಲ್ಲಿ KL ಮೈಲುಗಲ್ಲು – 8,000 ರನ್ ಗಡಿ ದಾಟಿದ ಕನ್ನಡಿಗ

ಹೈಕೋರ್ಟ್ ಹೇಳಿದ್ದೇನು?

ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​​, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.

ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.

Shwetha M

Leave a Reply

Your email address will not be published. Required fields are marked *