ಮುಡಾ ಹಗರಣ.. ಸಿಎಂಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ?
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಭವಿಷ್ಯ ಕರ್ನಾಟಕ ಹೈಕೋರ್ಟ್‌ನಲ್ಲಿದೆ. ಗುರುವಾರ ವಿಚಾರಣೆ ಮುಂದುವರಿಯಲಿದ್ದು, ಗುರುವಾರವೇ ಆದೇಶ ಹೊರಬೀಳುವ ಸಾಧ್ಯತೆಯಿದೆ. ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿಹಿಡಿಯುತ್ತದೆಯಾ? ಅಥವಾ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಮಾಡುತ್ತದೆಯಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
ಇದನ್ನೂ ಓದಿ: ಕನ್ನಡತಿ ಕಿರಣ್ ರಾಜ್ ಸಿನಿಮಾಗೆ ವಿಘ್ನ.. ರಾನಿ ಹೀರೋಗೆ ಅಪಘಾತ -ಆ ರಾತ್ರಿ ನಡೆದಿದ್ದೇನು?
ಮುಡಾ ಕೇಸ್ ಸಂಬಂಧ ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ನ್ಯಾ. ನಾಗಪ್ರಸನ್ನ ಗುರುವಾರ ಅರ್ಜಿ ವಿಚಾರಣೆ ಮುಗಿಸೋಣ ಅಂತ ಅರ್ಜಿದಾರರಿಗೆ ಮೌಖಿಕವಾಗಿ ತಿಳಿಸಿದ್ದರು. ಹೀಗಾಗಿ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ತೀರ್ಮಾನ ಆಗಲಿದೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ಸಿಎಂ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಲಿದ್ದಾರೆ. ಇವರ ವಾದ ಮುಗಿದ ಬಳಿಕ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರವಾಗಿ ಸುಪ್ರೀಂಕೋರ್ಟ್‌ನ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಮ್ಮ ಅಂತಿಮ ವಾದ ಮಂಡಿಸಲಿದ್ದಾರೆ. ಈ ವಾದ ಸರಣಿಯ ಮೇಲೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿಂತಿದೆ.
ಇನ್ನು, ಸಿದ್ದು ವಿರುದ್ಧ ತೀರ್ಪು ಬಂದಲ್ಲಿ ತಕ್ಷಣವೇ ತನಿಖಾ ಸಂಸ್ಥೆಗಳು ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಆಗ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತರಬೇಕು. ಇಲ್ಲವೇ ಕಾನೂನು ಕ್ರಮ ಎದುರಿಸಬೇಕು. ಹೈಕೋರ್ಟ್ ನೀಡಲಿರುವ ತೀರ್ಪು ಸಿದ್ದರಾಮಯ್ಯ ರಾಜಕೀಯ ಅಳಿವು-ಉಳಿವಿನ ತೀರ್ಮಾನ ಆಗಲಿದೆ.