ಕಾಂಗ್ರೆಸ್ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್ – ಬೆಳಗಾವಿಯಿಂದಲೇ ರೈಟ್..ರೈಟ್..

ಕಾಂಗ್ರೆಸ್ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್ – ಬೆಳಗಾವಿಯಿಂದಲೇ ರೈಟ್..ರೈಟ್..

ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್​ ಆಗಿದ್ದು, ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಬೆಳಗಾವಿಯಿಂದ ಶುರುವಾಗಲಿದೆ. ಒಟ್ಟು 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಕಾಂಗ್ರೆಸ್ ಬಸ್ ಯಾತ್ರೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:  ಭಾರತಕ್ಕೂ ಕೊರೊನಾ ಭೀತಿ – ಪರಿಸ್ಥಿತಿ ಎದುರಿಸಲು ಸಜ್ಜಾದ ಕೇಂದ್ರ ಆರೋಗ್ಯ ಇಲಾಖೆ

ಬೆಳಗಾವಿ ಜಿಲ್ಲೆ ದೊಡ್ಡದಿರುವುದರಿಂದ 2 ವಿಭಾಗ ಮಾಡಿಕೊಂಡಿದ್ದು, ಚಿಕ್ಕೋಡಿ, ಬೆಳಗಾವಿಯಲ್ಲಿ ತಲಾ ಒಂದು ಸಭೆ ನಡೆಸಲಿದ್ದಾರೆ. ಇನ್ನು ಜನವರಿ 14, 15ರಂದು ಸಂಕ್ರಾಂತಿ ಹಬ್ಬದ ಸಲುವಾಗಿ ಯಾತ್ರೆಗೆ ವಿರಾಮ ನೀಡಲಾಗಿದೆ. ಬೆಳಗಾವಿಯಲ್ಲೇ ಕಾಂಗ್ರೆಸ್​ನ ಪ್ರಥಮ ಅಧಿವೇಶನ ನಡೆದಿತ್ತು. ಹಾಗಾಗಿ ಬೆಳಗಾವಿಯಿಂದ ಬಸ್​ ಯಾತ್ರೆ ಆರಂಭ ಮಾಡುತ್ತಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜನವರಿ 11ರಂದು ಬೆಳಗಾವಿ ಜಿಲ್ಲೆಯಿಂದ ಆರಂಭವಾಗುವ ಬಸ್ ಯಾತ್ರೆ,  ಜನವರಿ 16ರಂದು ಹೊಸಪೇಟೆಗೆ ಬರಲಿದೆ. ನಂತರ ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ ಸಂಚರಿಸಲಿದೆ. ಜನವರಿ 18ರಂದು ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ ಇದ್ದು,  ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆಯಲ್ಲಿ ಸಂಚರಿಸಲಿದೆ.  ಜನವರಿ 21 ಹಾಸನ, ಚಿಕ್ಕಮಗಳೂರು ಹಾಗೂ ಜನವರಿ 22 ಉಡುಪಿ, ದಕ್ಷಿಣ ಕನ್ನಡದಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ, ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಜನವರಿ 25 ಚಾಮರಾಜನಗರ, ಮೈಸೂರು, ಜನವರಿ 26 ಮಂಡ್ಯ ಮತ್ತು ರಾಮನಗರದಲ್ಲಿ ಬಸ್ ಯಾತ್ರೆ ನಡೆಯಲಿದೆ. ಕೊನೆಯದಾಗಿ ಜನವರಿ 27ರಂದು ಯಾದಗಿರಿ-ಕಲಬುರಗಿಯಲ್ಲಿ ಬಸ್ ಯಾತ್ರೆ ಸಂಚರಿಸಲಿದೆ.

suddiyaana