ಎ. ಮಂಜು ಜೆಡಿಎಸ್ ಸೇರಲು ಮುಹೂರ್ತ ಫಿಕ್ಸ್ – ಮಾರ್ಚ್ 16ಕ್ಕೆ ಪಕ್ಷ ಸೇರ್ಪಡೆ

ಎ. ಮಂಜು ಜೆಡಿಎಸ್ ಸೇರಲು ಮುಹೂರ್ತ ಫಿಕ್ಸ್ – ಮಾರ್ಚ್ 16ಕ್ಕೆ ಪಕ್ಷ ಸೇರ್ಪಡೆ

ಮಾಜಿ ಸಚಿವ ಎ. ಮಂಜು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಪಕ್ಷ ಸೇರ್ಪಡೆಗೆ ದಿನಾಂಕ ಕೂಡಾ ಘೋಷಣೆ ಮಾಡಿದ್ದಾರೆ. ಈಗಾಗಲೇ ಜೆಡಿಎಸ್‌ ಪಕ್ಷದಿಂದ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಅರಕಲಗೂಡು ಕ್ಷೇತ್ರದಿಂದ ಎ.ಮಂಜು ಹೆಸರು ಘೋಷಣೆ ಮಾಡಲಾಗಿತ್ತು. ಈಗ ಬಿಜೆಪಿಯನ್ನು ತೊರೆದು ಅಧಿಕೃತವಾಗಿ ಜೆಡಿಎಸ್‌ ಸೇರುವ ಬಗ್ಗೆ ಘೋಷಣೆ ಮಾಡಿಕೊಂಡಿದ್ದಾರೆ. ಮಾರ್ಚ್ 16 ಕ್ಕೆ ಅರಕಲಗೂಡಿನಲ್ಲಿ ನಡೆಯಲಿರೊ ಪಂಚರತ್ನ ಯಾತ್ರೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:  ‘ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ’ ಎಂದು ‘ಕೈ’ ಕ್ಯಾಂಪೇನ್ – ಹೈಕೋರ್ಟ್ ನಲ್ಲಿ ಬಿಜೆಪಿ ಶಾಸಕನ ಭವಿಷ್ಯ!

ಎ. ಮಂಜು ಅವರಿಗೆ ಜೆಡಿಎಸ್‌ ಟಿಕೆಟ್‌ ಹಂಚಿಕೆ ಮಾಡಲಾಗಿದ್ದು, ಆದರೂ ಬಿಜೆಪಿ ತೊರೆದು ಅಧಿಕೃತವಾಗಿ ಜೆಡಿಎಸ್‌ ಸೇರ್ಪಡೆ ಆಗಿರಲಿಲ್ಲ. ಇನ್ನು ವಿಧಾನಸಭಾ ಚುನಾವಣೆಗೆ ಕೇವಲ 2 ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅರಕಲಗೂಡು ತಾಲೂಕಿನ, ಹನ್ಯಾಳು ಗ್ರಾಮದಲ್ಲಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಎಲ್ಲರೊಂದಿಗೆ ಚರ್ಚಿಸಿದ ಎ.ಮಂಜು ಅವರು ಎಲ್ಲರ ಸಮ್ಮುಖದಲ್ಲಿ ನಾನು ಜೆಡಿಎಸ್‌ನಿಂದ ಸ್ಪರ್ಧಿಸುತ್ತೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ನಂತರ ಸಭೆಯಲ್ಲಿದ್ದ ಎಲ್ಲ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಆಣೆ, ಪ್ರಮಾಣವನ್ನು ಮಾಡಿಸಿದ್ದಾರೆ. ಇಂದಿನಿಂದ ನಾವು ಎಲ್ಲರೂ ಜೆಡಿಎಸ್ ಪರವಾಗಿ ಪಕ್ಷಕ್ಕೆ ಕೆಲಸ ಮಾಡುತ್ತೇವೆ. ಎಲ್ಲರೂ ಸೇರಿಕೊಂಡು ಎ.ಮಂಜು ಅವರನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿಸಿಕೊಂಡಿದ್ದಾರೆ. ಮಾರ್ಚ್ 16ಕ್ಕೆ ಅರಕಲಗೂಡಿನಲ್ಲಿ ನಡೆಯಲಿರೊ ಪಂಚರತ್ನ ಯಾತ್ರೆ ಯಶಸ್ವಿಗೊಳಿಸೋ ಮೂಲಕ ಪಕ್ಷಕ್ಕೆ ಭರ್ಜರಿ ಸೇರ್ಪಡೆ ಆಗುವುದಕ್ಕೆ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ.

suddiyaana