ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಶಾಕ್ – ಮುಳ್ಳಯ್ಯನಗಿರಿ ತಪ್ಪಲು 4 ದಿನ ಬಂದ್

ಕಾಫಿನಾಡಿನ ಸ್ವರ್ಗ ಎಂದೇ ಕರೆಸಿಕೊಳ್ಳುವ ಮುಳ್ಳಯ್ಯನಗಿರಿಗೆ ಹೋಗಲು ಪ್ಲ್ಯಾನ್ ಮಾಡಿಕೊಂಡವರಿಗೆ ಮಹತ್ವದ ಸುದ್ದಿಯೊಂದಿದೆ. ಮುಂದಿನ ತಿಂಗಳು ನಾಲ್ಕು ದಿನಗಳ ಕಾಲ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಇದನ್ನೂ ಓದಿ: ಮಲ್ಲೇಶ್ವರಂ ಮಂತ್ರಿ ಮಾಲ್ಗೆ ಬಿತ್ತು ಬೀಗ! – ಏಕಾಏಕಿ ಅಧಿಕಾರಿಗಳು ಸೀಜ್ ಮಾಡಿದ್ದೇಕೆ?
ದತ್ತ ಪೀಠದಲ್ಲಿ, ಡಿಸೆಂಬರ್ 2 ರಿಂದ 4 ರವರೆಗೆ ದತ್ತ ಜಯಂತಿ ನಡೆಯಲಿದೆ. ದತ್ತಾತ್ರೇಯ ಜಯಂತಿಯು ಡಿಸೆಂಬರ್ 4ರಂದು ಪೂರ್ಣಿಮಾ ತಿಥಿ ಮುಗಿಯುವವರೆಗೂ ಆಚರಣೆಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 5ರ ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ.

ನೋಡಿರಿ

