ಮ್ಯಾನ್ಮಾರ್‌ ಭೂಕಂಪದಲ್ಲಿ ಸಾವಿನ ಸಂಖ್ಯೆ 694ಕ್ಕೆ ಏರಿಕೆ – ಅಫ್ಘಾನಿಸ್ತಾನದಲ್ಲೂ ಕಂಪಿಸಿದ ಭೂಮಿ

ಮ್ಯಾನ್ಮಾರ್‌ ಭೂಕಂಪದಲ್ಲಿ ಸಾವಿನ ಸಂಖ್ಯೆ 694ಕ್ಕೆ ಏರಿಕೆ – ಅಫ್ಘಾನಿಸ್ತಾನದಲ್ಲೂ ಕಂಪಿಸಿದ ಭೂಮಿ

ಮ್ಯಾನ್ಮಾರ್‌ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮಚ್ಚು ರೀಲ್ಸ್‌ ವಿವಾದ ಕೇಸ್‌ – ಜೈಲಿನಿಂದ ರಜತ್, ವಿನಯ್ ಗೌಡ ರಿಲೀಸ್

ಯನ್ಮಾರ್‌ನಲ್ಲಿ ಶುಕ್ರವಾರದಿಂದ 6 ಬಾರಿ ಭೂಕಂಪ ಸಂಭವಿಸಿದೆ. ಈಗಾಗಲೇ 694 ಮಂದಿ ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.

ಮತ್ತೊಂದೆಡೆ ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ಗಾಯಗೊಂಡ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಇದರಿಂದ ಮ್ಯಾನ್ಮಾರ್‌ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಇನ್ನು ಸಂತ್ರಸ್ತವಾಗಿರುವ ಮ್ಯಾನ್ಮಾರ್‌ಗೆ ಭಾರತ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್‌ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್‌, ಸೋಲಾರ್‌ ಲೈಟ್‌, ಜನರೇಟರ್‌ ಸೆಟ್‌ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ. ಈಗಾಗಲೇ ಸುಮಾರು 15 ಟನ್‌ ಪರಿಹಾರ ಸಾಮಗ್ರಿಗಳನ್ನು ಭಾರತೀಯ ವಾಯುಸೇನೆಯ C-130-J ವಿಮಾನ ವಿಮಾನದಲ್ಲಿ ಮ್ಯಾನ್ಮಾರ್‌ಗೆ ಕಳುಹಿಸಲಾಗುತ್ತಿದೆ.

ಮ್ಯಾನ್ಮಾರ್‌, ಥಾಯ್ಲೆಂಡ್‌ನಲ್ಲಿ ಭೂಂಕಪದ ಬೆನ್ನಲ್ಲೇ ಶನಿವಾರ ಮುಂಜಾನೆ ಅಫ್ಘಾನಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಮುಂಜಾನೆ 5:16ಕ್ಕೆ ಭೂಮಿ ಕಂಪಿಸಿದ್ದು, ಭೂಮಿಯಿಂದ 180 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದ್ದೆ. ರಿಕ್ಟರ್‌ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಅಫ್ಘಾನಿಸ್ತಾನದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

Shwetha M