ಮೈಸೂರು ದಸರಾಗೆ ದಿನಗಣನೆ ಆರಂಭ – ಮಂಗಳವಾರ ಅಭಿಜಿತ್​​​​​​ ಲಗ್ನದಲ್ಲಿ ಗಜಪಡೆಗೆ ಅದ್ಧೂರಿ ಸ್ವಾಗತ

ಮೈಸೂರು ದಸರಾಗೆ ದಿನಗಣನೆ ಆರಂಭ – ಮಂಗಳವಾರ ಅಭಿಜಿತ್​​​​​​ ಲಗ್ನದಲ್ಲಿ ಗಜಪಡೆಗೆ ಅದ್ಧೂರಿ ಸ್ವಾಗತ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಜಂಬೂಸವಾರಿ ಕೂಡ ಒಂದು. ಈಗಾಗಲೇ ಗಜಪಯಣ ಆರಂಭವಾಗಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ. ಈ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ಮಂಗಳವಾರ(ಸೆ.05)ಕ್ಕೆ ಮುಂದೂಡಲಾಗಿದೆ.

ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01ರಿಂದ 12.51ರ ಅಭಿಜಿತ್​​​​​ ಲಗ್ನದಲ್ಲಿ ಆನೆಗಳಿಗೆ ಪೂಜೆ ಮಾಡುವ ಮೂಲಕ ಗಜಪಡೆಯನ್ನು ಸ್ವಾಗತ ಮಾಡಿಕೊಳ್ಳಲು ಅರಮನೆ ಮಂಡಳಿ ಸಿದ್ದತೆ ಮಾಡಿಕೊಂಡಿದೆ.

ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭ – ನಾಗರಹೊಳೆಯಿಂದ ದಸರಾ ಗಜಪಯಣಕ್ಕೆ ಅಧಿಕೃತ ಚಾಲನೆ

ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಗಜಪಡೆಯನ್ನು ಬರಮಾಡಿಕೊಳ್ಳುತ್ತಾರೆ. ಸಿಎಂ ಸಿದ್ದರಾಮಯ್ಯ ಅವರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳವಾರದಿಂದ ಗಜಪಡೆ ಅರಮನೆಯಲ್ಲಿ ಬೀಡು ಬಿಡಲಿವೆ.

ಸೆಪ್ಟೆಂಬರ್‌ 1 ರಂದು ಗಜಪಯಣ ಚಾಲನೆ ನೀಡಲಾಗಿತ್ತು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆಯ ವೀರನಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಗಿತ್ತು. ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಯನ್ನು ಸ್ವಾಗತಿಸಲಾಗುತ್ತಿದೆ.

suddiyaana