ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ – ನಾಲ್ಕು ದಿನ ಮೆಟ್ರೋ ಸಂಚಾರ ಸ್ಥಗಿತ

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ – ನಾಲ್ಕು ದಿನ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ಮೈಸೂರು ರಸ್ತೆಯಿಂದ ಕೆಂಗೇರಿ ನಡುವಿನ ಮೆಟ್ರೋ ಸೇವೆಯನ್ನು ಜ.27ರಿಂದ ಜ.30ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಬಿಎಮ್ ಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ವಿಸ್ತರಣಾ ಮಾರ್ಗದ ಕಾರ್ಯಾರಂಭಕ್ಕೆ ಕಾಮಗಾರಿ ನಡೆಯಲಿರುವುದರಿಂದ ಮೈಸೂರು ರಸ್ತೆಯಿಂದ ಕೆಂಗೇರಿ ನಿಲ್ದಾಣಗಳ ನಡುವೆ ನಾಲ್ಕು ದಿನಗಳ ಕಾಲ ನೇರಳೆ ಮಾರ್ಗದ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗುತ್ತಿದೆ.

ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ವಿಚಾರ – ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಹೇಳಿದ್ದೇನು..?

ಈ ಬಗ್ಗೆ ಮಾತನಾಡಿರುವ ಬಿಎಮ್ ಆರ್ ಸಿಎಲ್ ಅಧಿಕಾರಿಗಳು, ‘ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ಮಾರ್ಗ ವಿಸ್ತರಣಾ  ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಹಿನ್ನೆಲೆ ನೇರಳೆ ಮಾರ್ಗದ ಕೆಂಗೇರಿಯಿಂದ ಮೈಸೂರು ರಸ್ತೆಯ ಮೆಟ್ರೋ ಸಂಚಾರವನ್ನು 4 ದಿನಗಳ ಕಾಲ ಸ್ಥಗಿತಗೊಳಿಸಲಾಗುವುದು. ಆದರೆ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ ಎಂದು ಮಾಹಿತಿ ನೀಡಿದರು.

ಬೈಯಪ್ಪನಹಳ್ಳಿಯಿಂದ ಕೆಂಗೇರಿವರೆಗಿನ ಮಾರ್ಗದಲ್ಲಿ ರೈಲು ಸೇವೆ ಜ. 31ರ ಬೆಳಗ್ಗೆ 5.00 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ಪುನಾರಂಭವಾಗುತ್ತದೆ. ಇನ್ನುಳಿದಂತೆ ಹಸಿರು ಮಾರ್ಗದ ನಾಗಸಂದ್ರದಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದ್ದಾರೆ.

suddiyaana