ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ – ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ

ಮೈಸೂರು ದಸರಾದ ಪ್ರಮುಖ ಆಕರ್ಷಣೆ ಅಂದರೆ ಅದು ಜಂಬೂ ಸವಾರಿ. ತಾಯಿ ಚಾಮಂಡಿಯನ್ನ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ಇಟ್ಟು ಮೆರವಣಿಗೆ ಮಾಡಲಾಗುತ್ತೆ. ಇದೇ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಶುಭ ಧನುರ್ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿದೆ.
ಇದನ್ನೂ ಓದಿ:ಕೇಂದ್ರದಿಂದ ರಾಜ್ಯಗಳಿಗೆ ಬಂಪರ್ ಗಿಫ್ಟ್ – 1,01,603 ಕೋಟಿಯಲ್ಲಿ ಕರ್ನಾಟಕಕ್ಕೆ ಸಿಕ್ತು ₹3705 ಕೋಟಿ
ಕೋಟೆ ಆಂಜನೇಯ ಸ್ವಾಮಿ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಾಯಿತು. ಈ ವೇಳೆ ಸಿಎಂ ಈಡುಗಾಯಿ ಒಡೆದರು. ಎರಡು ಸಲ ವಿಫಲವಾಗಿ, ಮೂರನೇ ಬಾರಿಗೆ ಈಡುಗಾಯಿ ಒಡೆಯುವಲ್ಲಿ ಅವರು ಯಶಸ್ವಿಯಾದರು. ಸಿದ್ದರಾಮಯ್ಯ ಅವರು ಪೂಜೆ ಸಲ್ಲಿಸುವ ವೇಳೆ ಸಚಿವ ಮಹಾದೇವಪ್ಪ, ಭೈರತಿ ಸುರೇಶ್ ಇನ್ನಿತರರು ಉಪಸ್ಥಿತರಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿಖ್ಯಾತ ಜಂಬೂ ಸವಾರಿ ಇಂದು ನಡೆಯಲಿದೆ. ಈಗಾಗಲೇ ನಂದಿ ಧ್ವಜ ಪೂಜೆ ನೆರವೇರಿದೆ. ಎಲ್ಲಾ ಪ್ರವಾಸಿಗರಿಗೆ ಸ್ವಾಗತ ಕೋರುತ್ತೇನೆ. ಹಿಂದೆ ಸಿಎಂ ಆಗಿದ್ದಾಗಲೂ ನಾನು ದಸರಾದಲ್ಲಿ ಭಾಗಿಯಾಗಿದ್ದೇನೆ. ಸಿಎಂ ಆಗಿ 8 ಸಲ ದಸರಾಕ್ಕೆ ಬಂದಿದ್ದೇನೆ. ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ರಾಜ್ಯದ ಜನ ಎಲ್ಲರೂ ಖುಷಿಯಾಗಿದ್ದರೆ ಸರ್ಕಾರ ಸಹ ಸಂತೋಷವಾಗಿರುತ್ತದೆ ಎಂದಿದ್ದಾರೆ.

ನೋಡಿರಿ

