ಈ ಬಾರಿ ಪರಿಸರ ಸ್ನೇಹಿ ದಸರಾ – ಪ್ಲಾಸ್ಟಿಕ್ ಬಳಸಿದ್ರೆ ಬೀಳುತ್ತೆ ಭಾರಿ ದಂಡ!
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಗಜಪಡೆಗಳೂ ಜಂಬೂಸವಾರಿಗೆ ಸಜ್ಜಾಗುತ್ತಿವೆ. ಅರಮನೆ ನಗರು ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ. ಈ ಬಾರಿಯ ನಾಡಹಬ್ಬ ದಸರಾವನ್ನು ಪರಿಸರ ಸ್ನೇಹಿ ಹಾಗೂ ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.
ದಸರಾ ಸಂದರ್ಭದಲ್ಲಿ ಹೆಚ್ಚಿನ ಪ್ರವಾಸಿಗರು ಮೈಸೂರಿನ ನಾನಾ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ವಿವಿಧ ಮಳಿಗೆ, ಅಂಗಡಿ ಮುಂಗಟ್ಟು, ದಸರಾ ಕಾರ್ಯಕ್ರಮ ನಡೆಯುವ ಸ್ಥಳ, ಆಹಾರ ಮೇಳ, ಯುವ ದಸರಾ, ಚಾಮುಂಡಿಬೆಟ್ಟ, ಅರಮನೆ, ಝೂ ಹಾಗೂ ಪ್ರಮುಖ ಬೀದಿ ಬದಿಯಲ್ಲಿಉತ್ಪಾದನೆಯಾಗುವ ಕಸದಲ್ಲಿ ಪ್ಲಾಸ್ಟಿಕ್ ಪ್ರಮಾಣವೇ ಹೆಚ್ಚಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಸಲ ಪ್ಲಾಸ್ಟಿಕ್‌ಗೆ ಬ್ರೇಕ್ ಹಾಕಿ ಪರಿಸರ ಸ್ನೇಹಿ ದಸರಾ ಆಚರಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಇದನ್ನೂ ಓದಿ: ನಾಡಹಬ್ಬ ದಸರಾಗೆ ಕ್ಷಣಗಣನೆ – 9 ದಿನದಲ್ಲಿ ಅರಮನೆಯಲ್ಲಿ ಏನೇನು ಕಾರ್ಯಕ್ರಮ ನಡೆಯಲಿದೆ?
ಮೈಸೂರಿನ ಪ್ರತಿದಿನ ನಗರದಲ್ಲಿ550 ಟನ್ ಕಸ ನಿತ್ಯ ಸಂಗ್ರಹವಾಗುತ್ತಿದೆ. ದಸರಾ ವೇಳೆ 10 ಟನ್ ಕಸ ಹೆಚ್ಚುವರಿಯಾಗಿ ಸಂಗ್ರಹವಾಗುತ್ತದೆ. ಇದರಲ್ಲಿಶೇ. 50ರಷ್ಟು ಕಸ ಪ್ಲಾಸ್ಟಿಕ್ ಬಾಟಲ್, ಕವರ್‌ಗಳೇ ಆಗಿರುತ್ತವೆ. ಈ ಹಿನ್ನೆಲೆಯಲ್ಲಿಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಹಾಗೂ ನಗರಪಾಲಿಕೆ ನಿರ್ಧರಿಸಿದೆ. ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿತ್ಯಾಜ್ಯ ವಸ್ತುಗಳ ನಿರ್ವಹಣೆ, ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸಲಾಗುತ್ತಿದೆ.
ಪ್ಲಾಸ್ಟಿಕ್ ಮುಕ್ತ ದಸರಾ ನಡೆಸಲು ನಗರಪಾಲಿಕೆ ಉತ್ಸುಕವಾಗಿದೆ. ಎಲ್ಲೆಲ್ಲಿಹೆಚ್ಚು ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ಸಂಗ್ರಹವಾಗುತ್ತದೆ ಅಲ್ಲೆಲ್ಲಾಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಅಂಗಡಿಗಳಲ್ಲಿಪ್ಲಾಸ್ಟಿಕ್ ಬಳಕೆ ಕಂಡು ಬಂದರೆ ದಂಡ ವಿಧಿಸುತ್ತಿದ್ದೇವೆ. ಈ ಸಂಬಂಧ ಹೋಟೆಲ್ ಮಾಲೀಕರ ಸಂಘ, ಚೇಂಬರ್ ಆಫ್ ಕಾಮರ್ಸ್, ಬೀದಿಬದಿ ವ್ಯಾಪಾರಿಗಳೊಂದಿಗೆ ಸಭೆ ನಡೆಸಿ, ಪರಿಸರ ಸ್ನೇಹಿ ದಸರಾ ಆಚರಣೆಗೆ ಸಹಕರಿಸುವಂತೆ ಮನವಿ ಮಾಡಲಾಗುವುದು ಎಂದು ನಗರಪಾಲಿಕೆ ಮೇಯರ್ ಶಿವಕುಮಾರ್ ತಿಳಿಸಿದ್ದಾರೆ.