ಸಿಎಂಗೆ ಮತ್ತಷ್ಟು ಸಂಕಷ್ಟ ತಂದ ಮುಡಾ ಕೇಸ್ – ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು

ಮುಡಾ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಮುಡಾ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ: RCBಗೆ ಬರಲು ರೆಡಿ ಇದ್ರಾ ರಿಷಭ್? – ಪಂತ್ ಸೇರ್ಪಡೆಗೆ ಕೊಹ್ಲಿ ಅಡ್ಡಗಾಲು?
ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದರು.
ಯಾರ ವಿರುದ್ಧ ಎಫ್‌ಐಆರ್?
- ಮುಖ್ಯಮಂತ್ರಿ ಸಿದ್ದರಾಮಯ್ಯ (A1)
- ಪಾರ್ವತಿ ಬಿಎಂ, (ಸಿದ್ದರಾಮಯ್ಯ ಪತ್ನಿ) (A2)
- ಮಲ್ಲಿಕಾರ್ಜುನ ಸ್ವಾಮಿ, (ಸಿದ್ದರಾಮಯ್ಯ ಅವರ ಬಾಮೈದ) (A3)
- ದೇವರಾಜು, (ಮಾರಾಟಗಾರ, ನಕಲಿ ಭೂ ಮಾಲೀಕ) (A4)
- ಇತರರು