ಖಾಸಗಿ ಶಾಲೆಗಳಲ್ಲಿ ಇನ್ನುಮುಂದೆ ನಾಡಗೀತೆ ಕಡ್ಡಾಯವಲ್ಲ! – ವಿವಾದಿತ ಆದೇಶ ಹೊರಡಿಸಿದ ಸರ್ಕಾರ!
ವಸತಿ ಶಾಲೆಗಳಲ್ಲಿ ಕುವೆಂಪು ಅವರ ಸಾಲುಗಳನ್ನು ಬದಲಿಸಿ ಟೀಕೆಗೆ ಗುರಿಯಾಗಿದ್ದ ರಾಜ್ಯ ಸರ್ಕಾರ, ಇದೀಗ ಮತ್ತೊಂದು ವಿವಾದಿತ ಆದೇಶವನ್ನು ಹೊರಡಿಸಿದೆ. ಇನ್ನುಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶವನ್ನು ನೀಡಿದೆ. ಇದೀಗ ಈ ಆದೇಶ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿಗೆ ಗಂಡು ಮಗು – ಮುದ್ದು ಕಂದನಿಗೆ ಅಕಾಯ್ ಎಂದು ಹೆಸರಿಟ್ಟ ಕಿಂಗ್ ಕೊಹ್ಲಿ
ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು. ಇದೀಗ ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.