60 ವರ್ಷಗಳ ಬಳಿಕ ಮೊದಲ ಬಾರಿಗೆ ಮಹಿಳಾ ಶಾಸಕಿ ಆಯ್ಕೆ – ಇತಿಹಾಸ ಬರೆದ ನಾಗಾಲ್ಯಾಂಡ್ ಚುನಾವಣೆ!

60 ವರ್ಷಗಳ ಬಳಿಕ ಮೊದಲ ಬಾರಿಗೆ ಮಹಿಳಾ ಶಾಸಕಿ ಆಯ್ಕೆ – ಇತಿಹಾಸ ಬರೆದ ನಾಗಾಲ್ಯಾಂಡ್ ಚುನಾವಣೆ!

ಈಶಾನ್ಯ ರಾಜ್ಯಗಳಾದ ತ್ರಿಪುರಾ, ನಾಗಾಲ್ಯಾಂಡ್ ಹಾಗೂ ಮೇಘಾಲಯ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ತ್ರಿಪುರಾ ಮತ್ತು ನಾಗಾಲ್ಯಾಂಡ್​​ಗಳಲ್ಲಿ ಬಿಜೆಪಿ ಮೈತ್ರಿ ಕೂಟ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಆದ್ರೆ ಇಲ್ಲಿ ಚುನಾವಣೆಗಿಂತ ಹೆಚ್ಚು ಸದ್ದು ಮಾಡುತ್ತಿರೋದು ನಾಗಾಲ್ಯಾಂಡ್ ಶಾಸಕಿ.

60 ವರ್ಷಗಳ ನಂತರ ಇದೇ ಮೊದಲ ಬಾರಿಗೆ ನಾಗಾಲ್ಯಾಂಡ್ ನಲ್ಲಿ ಮಹಿಳಾ ಶಾಸಕಿ ಆಯ್ಕೆಯಾಗಿದ್ದಾರೆ.  ಎನ್‌ಡಿಪಿಪಿಯ ಹೆಖಾನಿ ಜಖಾಲು ಅವರಿಗೆ ಐತಿಹಾಸಿಕ ಗೆಲುವು ಸಿಕ್ಕಿದೆ. ನಾಗಾಲ್ಯಾಂಡ್ ರಾಜ್ಯ ಸ್ಥಾನಮಾನ ಪಡೆದ 60 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮಹಿಳಾ ಶಾಸಕಿಯಾಗಿ ಆಯ್ಕೆಯಾಗುವ ಮೂಲಕ ಗೆಲುವಿನ ನಗಾರಿ ಬಾರಿಸಿದ್ದಾರೆ. ಬಿಜೆಪಿಯ ಮಿತ್ರಪಕ್ಷವಾದ ಎನ್‌ಡಿಪಿಪಿಯ ಹೆಕಾನಿ ಜಖಾಲು ಅವರು ದಿಮಾಪುರ್ 3 ಕ್ಷೇತ್ರದಿಂದ ಗೆದ್ದಿದ್ದಾರೆ. ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಒಟ್ಟು 183 ಅಭ್ಯರ್ಥಿಗಳ ಪೈಕಿ ನಾಲ್ವರು ಮಹಿಳೆಯರಲ್ಲಿ 48 ವರ್ಷದ ವಕೀಲೆ ಹೆಕಾನಿ ಜಖಾಲು ಒಬ್ಬರು.

ಇದನ್ನೂ ಓದಿ : ಹೇ ಮಂತ್ರಿಗಳೇ ನಿಂತ್ಕೊಳ್ರಿ.. ಅಶ್ವತ್ಥ್ ಮೇಲೆ ಸುರೇಶ್ ಕೆಂಡಾಮಂಡಲ – ಆಸ್ಪತ್ರೆ ಉದ್ಘಾಟನೆಯಲ್ಲಿ ಹೈಡ್ರಾಮಾ!

ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ ಪರವಾಗಿ ಹೋರಾಡಿದ ಜಖಾಲು 1,500 ಕ್ಕೂ ಹೆಚ್ಚು ಮತಗಳ ಅಂತರದಿಂದ ಎಲ್‌ಜೆಪಿ (ರಾಮ್ ವಿಲಾಸ್) ನ ಅಜೆಟೊ ಝಿಮೊಮಿ ಅವರನ್ನು ಸೋಲಿಸಿದ್ದಾರೆ. ವೃತ್ತಿಯಲ್ಲಿ ವಕೀಲೆಯಾಗಿರುವ ಜಖಾಲು ಕಳೆದ ಎರಡು ದಶಕಗಳಿಂದ ಸರ್ಕಾರೇತರ ಸಂಸ್ಥೆ ‘ಯೂತ್‌ನೆಟ್ ನಾಗಾಲ್ಯಾಂಡ್’ ಎಂಬ ಎನ್ ಜಿಒ ನಡೆಸುತ್ತಿದ್ದಾರೆ. ಈ ಮೂಲಕ ಅಧ್ಯಯನ ಮಾಡಲು ಬಯಸುವ ಸಾವಿರಾರು ಯುವಕರಿಗೆ ಸಹಾಯ ಮಾಡುತ್ತಿದ್ದಾರೆ.

suddiyaana