ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದ ನಳೀನ್‌ ಕುಮಾರ್‌ ಕಟೀಲ್!‌

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದ ನಳೀನ್‌ ಕುಮಾರ್‌ ಕಟೀಲ್!‌

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್‌ ಕುಮಾರ್‌ ಕಟೀಲ್‌ ರಾಜೀನಾಮೆ ನೀಡುವುದಾಗಿ ಹೇಳಿದ್ದರು.  ಇದೀಗ ಕಟೀಲ್‌ ಯೂಟರ್ನ್‌ ಹೊಡೆದಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಮಾತನಾಡಿರುವ ನಳೀನ್‌ ಕುಮಾರ್‌ ಕಟೀಲ್‌,  ‘ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯುತ್ತದೆ. ನೈತಿಕವಾಗಿ ಜವಾಬ್ದಾರಿ ಹೊತ್ತು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ. ನಿರ್ಧಾರದ ಬಗ್ಗೆ ಮೌಖಿಕವಾಗಿಯೂ ತಿಳಿಸಿದ್ದೇನೆ’ ಎಂದು ಹೇಳಿದ್ದರು. ಆದರೆ ಈಗ ನಾನು ರಾಜೀನಾಮೆ ಬಗ್ಗೆ ಎಲ್ಲಿಯೂ ಹೇಳಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದೆ KSRTC ಬಸ್ ನಿಲ್ದಾಣ! – ಉಚಿತ ಓಡಾಟ ಉತ್ಸಾಹ ಕಳೆದುಕೊಂಡ್ರಾ ಮಹಿಳೆಯರು?

ಪಕ್ಷದಲ್ಲಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಯಾವುದೇ ಕೂಗಿಲ್ಲ. ಆದರೇ ನನ್ನ ಎರಡು ಟರ್ಮ್​ನ ಅವಧಿ ಮುಗಿದಿದೆ. ಹೀಗಾಗಿ ಸಹಜವಾಗಿಯೇ ರಾಜ್ಯಾಧ್ಯಕ್ಷರ ಬದಲಾವಣೆ ಆಗಬೇಕು. ನಮ್ಮ ಪಕ್ಷದಲ್ಲಿ ಅಧ್ಯಕ್ಷರ ಅವಧಿ ಎರಡು ವರ್ಷ. ಆದರೆ ನಾನು ನಾಲ್ಕು ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ. ಬಿಜೆಪಿ ಪಕ್ಷದಲ್ಲಿ ಅಧ್ಯಕ್ಷರ ಬದಲಾವಣೆ ಕೂಗಿಲ್ಲ. ವಿ.ಸೋಮಣ್ಣ ಅವರು ಅಧ್ಯಕ್ಷ ಸ್ಥಾನ ಕೇಳಿದರೆ ಯಾವುದೇ ತಪ್ಪಿಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕ. ರಾಷ್ಟ್ರೀಯ ಅಧ್ಯಕ್ಷರಿಗೆ ಏನು ಹೇಳಬೇಕೊ ಅದನ್ನು ಈಗಾಗಲೇ ಹೇಳಿ ಕಳುಹಿಸಿದ್ದೇನೆ  ಎಂದು ನಳೀನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

suddiyaana