ವೀಕೆಂಡ್ ಮೂಡ್ ನಲ್ಲಿದ್ದ ಸಿಟಿ ಮಂದಿಗೆ ನಮ್ಮ ಮೆಟ್ರೋ ಶಾಕ್ – ಭಾನುವಾರ ಈ ಲೈನ್ ನಲ್ಲಿ 2 ಗಂಟೆ ಸಂಚಾರ ಬಂದ್

ಟ್ರಾಫಿಕ್ ಜಾಮ್ ಕಿರಿಕಿರಿ ತಪ್ಪಿಸಿ ಪ್ರಯಾಣದಲ್ಲಿ ಸಮಯ ಉಳಿಸುತ್ತಿರೋ ನಮ್ಮ ಮೆಟ್ರೋಗೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಅದರಲ್ಲೂ ವೀಕೆಂಡ್ ಎಂದಾಗ ಪ್ರಯಾಣಿಕರ ಸಂಖ್ಯೆ ಜಾಸ್ತಿ ಆಗುತ್ತೆ. ಆದರೆ ಮೇ 10 ಅಂದ್ರೆ ಭಾನುವಾರ ನಮ್ಮಮೆಟ್ರೋ ಪ್ರಯಾಣದಲ್ಲಿ ಸ್ವಲ್ಪ ವ್ಯತ್ಯಯ ಆಗಲಿದೆ. ಹೀಗಾಗಿ ನಮ್ಮ ಮೆಟ್ರೋ ಪ್ರಯಾಣಿಕರು ಸಹಕಾರ ನೀಡುವಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.
ಇದನ್ನೂ ಓದಿ : ತಾಯಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಅಪ್ರಾಪ್ತೆ ಮೇಲೆ ಲೈಂ*ಗಿಕ ದೌರ್ಜನ್ಯ – ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯಿಂದಲೇ ಹೀನ ಕೃತ್ಯ
ನಮ್ಮ ಮೆಟ್ರೋ ಸಂಚಾರದಲ್ಲಿ ಕೆಲ ತಾಂತ್ರಿಕ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದ ಸಮಯದಲ್ಲಿ ಕೆಲವು ಸಲ ವ್ಯತ್ಯಯ ಆಗುತ್ತದೆ. ಈಗ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ವ್ಯತ್ಯಯವಾಗಲಿದೆ. ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ ಹೊನಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ ಆಗಲಿದೆ ಎಂದು BMRCL ತಿಳಿಸಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಮೇ 10ರಂದು ಭಾನುವಾರದಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜ್ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಾಗಿ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯು ತಾತ್ಕಾಲಿಕವಾಗಿ ಎರಡು ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ 7 ಗಂಟೆಯಿಂದ ಗಂಟೆಯಿಂದ 9ರವರೆಗೆ ಸ್ಥಗಿತಗೊಳ್ಳಲಿದೆ.
ಬೆಳಿಗ್ಗೆ 9 ಗಂಟೆಯ ನಂತರ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ, ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಾಹಿತಿ ನೀಡಿದೆ. ಇನ್ನು ನಮ್ಮ ಮೆಟ್ರೋದ ಪಿಂಕ್ ಲೈನ್ ನ ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆ (RDSO) ಈಗಾಗಲೇ ತನ್ನ ನಿರ್ಣಾಯಕ ಪರೀಕ್ಷೆಗಳನ್ನು ಪ್ರಾರಂಭಿಸಿದೆ. ಇದು ಪೂರ್ಣಗೊಂಡ ನಂತರ ಪಿಂಕ್ ಮೆಟ್ರೋ ತನ್ನ ವಾಣಿಜ್ಯ ಸಂಚಾರವನ್ನು ಪ್ರಾರಂಭಿಸಲಿದೆ. ಪಿಂಕ್ ಲೈನ್ ನಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಈ ನಿರ್ಣಾಯಕ ಪರೀಕ್ಷೆಗಳು ಮೇ 12 ರವರೆಗೆ ನಡೆಯಲಿದೆ.

ನೋಡಿರಿ

