ಮೆಟ್ರೋ ಟಿಕೆಟ್ ದರ ಸಮರ!‌ : ಮೆಟ್ರೋ ನಿಲ್ದಾಣದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ – ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

ಮೆಟ್ರೋ ಟಿಕೆಟ್ ದರ ಸಮರ!‌ : ಮೆಟ್ರೋ ನಿಲ್ದಾಣದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ – ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

ದಿನನಿತ್ಯ ಲಕ್ಷಾಂತರ ಜನರ ಜೀವನದ ಅವಿಭಾಜ್ಯ ಅಂಗವಾಗಿರುವ ನಮ್ಮ ಮೆಟ್ರೋ ಈಗ ದೇಶದಲ್ಲೇ ಅತೀ ದುಬಾರಿ ಮೆಟ್ರೋ ಸೇವೆಯಾಗಿದೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಜೋರಾಗಿದೆ. ಇತ್ತೀಚೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಟಿಕೆಟ್ ದರ ಏರಿಕೆಗೆ ಮುಂದಾಗಿರುವ ಚರ್ಚೆಯ ಮಧ್ಯೆ ಜನ ಸಾಮಾನ್ಯರ ಕೋಪಕ್ಕೆ ಕಾರಣವಾಗಿದೆ. ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಮ್‌ನಿಂದ ಚಿನ್ನ ತೆಗೆದ ವ್ಯಕ್ತಿ! – ಅಬ್ಬಬ್ಬಾ.. 1 ಐಡಿಯಾ.. ಲಕ್ಷ ಲಕ್ಷ ಸಂಪಾದನೆ!

ನಮ್ಮ ಮೆಟ್ರೋ ದರವನ್ನು ಶೇ. 5ರಷ್ಟು ಏರಿಕೆ ಮಾಡಲು ಬಿಎಂಆರ್‌ಸಿಎಲ್ ನಿರ್ಧರಿಸಿತ್ತು. ಆದರೆ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದೀಗ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಖಾಲಿ ಟ್ರಂಕ್‌ ಹಿಡಿದುಕೊಂಡು ಬಂದ ತೇಜಸ್ವಿ ಸೂರ್ಯ ಟ್ರಂಕ್‌ ತೆರೆದು ರಾಜ್ಯ ಸರ್ಕಾರ ಖಾಲಿಯಾಗಿದೆ ಎಂದು ಹೇಳಿದರು.

ನಾನು ಪ್ರತಿಭಟನೆ ಮಾಡುತ್ತಿಲ್ಲ. ಖಾಲಿ ಟ್ರಂಕ್‌ ಹಿಡಿದು ಪ್ರತಿಭಟನೆ ನಡೆಸುತ್ತಿದ್ದೇನೆ. ನನ್ನನ್ನು ಯಾರೂ ತಡೆಯಬಾರದು ಎಂದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆದಾಗ, ನಾನು ಖಾಲಿ ಟ್ರಂಕ್‌ ಹಿಡಿದುಕೊಂಡಿದ್ದೇನೆ. ಸಂಸತ್ತು ಅಧಿವೇಶನ ನಡೆಯುತ್ತಿದ್ದಾಗ ನನ್ನನ್ನು ವಶಕ್ಕೆ ಪಡೆಯುವಂತಿಲ್ಲ. ಕಾನೂನು ತಿಳಿದುಕೊಂಡು ವಶಕ್ಕೆ ಪಡೆಯಿರಿ ಎಂದರು. ತೇಜಸ್ವಿ ಸೂರ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು ಟ್ರಂಕ್‌ ಮೇಲಿದ್ದ ಕಾಂಗ್ರೆಸ್‌ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರ ಪೋಸ್ಟರ್‌ ತೆಗೆದರು.

ಬಿಜೆಪಿಯ ಮೌನ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ರಾಮಮೂರ್ತಿ ಅವರು, ದರ ಏರಿಕೆಗೆ ತಾತ್ಕಾಲಿಕ ತಡೆ ಆಗಿದೆ. ದರ ಏರಿಕೆ ಕೂಡಲೇ ಕೈ ಬಿಡಬೇಕು. ಈಗಿರುವ ದರವನ್ನೂ ಕಡಿಮೆ ಮಾಡಬೇಕು. ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ರು.

ಬಿಜೆಪಿ ಪ್ರತಿಭಟನೆ ನಡೆಸುವ ವಿಚಾರ ತಿಳಿದು ಮೊದಲೇ ಸರ್ಕಾರ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿತ್ತು. ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿ ಭದ್ರತೆ ನೀಡಿತ್ತು. ನಿಲ್ದಾಣದ ಹೊರಗೆ ಬಿಎಂಆರ್‌ಸಿಎಲ್‌ ಭದ್ರತಾ ವಿಭಾಗದ ಸಿಬ್ಬಂದಿಯೂ ನಿಂತಿದ್ದರು.

Shwetha M

Leave a Reply

Your email address will not be published. Required fields are marked *