ನಮ್ಮ ಮೆಟ್ರೋದಲ್ಲಿ 27 ಸಾವಿರ ಪ್ರಯಾಣಿಕರಿಂದ ನಿಯಮ ಉಲ್ಲಂಘನೆ! – ಪ್ರಯಾಣದ ವೇಳೆ ಮಾಡಿದ ತಪ್ಪುಗಳು ಏನೇನು ಗೊತ್ತೆ?

ನಮ್ಮ ಮೆಟ್ರೋ ಸಿಲಿಕಾನ್ ಸಿಟಿ ಜನರ ಜೀವನಾಡಿ. ಲಕ್ಷಾಂತರ ಜನರು ತಮ್ಮ ದೈನಂದಿನ ಕೆಲಸಕ್ಕೆ ತೆರಳಲು ನಮ್ಮ ಮೆಟ್ರೋವನ್ನೇ ಅವಲಂಬಿಸಿದ್ದಾರೆ. ಇದೀಗ ಪ್ರಯಾಣಿಕರು ಬಗ್ಗೆ ಬಿಎಂಆರ್‌ಸಿಎಲ್ ಶಾಕಿಂಗ್ ವರದಿಯೊಂದನ್ನ ಬಿಡುಗಡೆ ಮಾಡಿದೆ. ಕಳೆದ ಆರು ತಿಂಗಳಿನಲ್ಲಿ ನಮ್ಮ ಮೆಟ್ರೋದಲ್ಲಿ ಒಟ್ಟು 27 ಸಾವಿರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿವೆ.
ಇದನ್ನೂ ಓದಿ: ರಾಜ Vs ರಾಜಕುಮಾರ – RCB ಫ್ಯಾನ್ಸ್ ಕಾಲೆಳೆದ್ರಾ ಗಿಲ್?
ಈ ಬಗ್ಗೆ ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ. ಮೆಟ್ರೋದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಅನೇಕ ಬಾರಿ ನಿಯಮ ಉಲ್ಲಂಘಿಸಿದ್ದಾರೆ. ಕಳೆದ 6 ತಿಂಗಳಲ್ಲಿ ಒಟ್ಟು 27 ಸಾವಿರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ನಿಯಮ ಉಲ್ಲಂಘನೆ ಮಾಡಿದವರಿಗೆ ಭದ್ರತಾ ಸಿಬ್ಬಂದಿ ದಂಡ ವಿಧಿಸದೇ ಎಚ್ಚರಿಕೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 27 ಸಾವಿರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಆ ಪೈಕಿ ಮೊಬೈಲ್‌ನಲ್ಲಿ ಜೋರಾಗಿ ಸಂಗೀತ ಹಾಕಿದ್ದಕ್ಕಾಗಿ 11,922 ಪ್ರಕರಣಗಳು, ವಿಶೇಷ ಚೇತನರು, ಗರ್ಭಿಣಿಯರು, ಹಿರಿಯ ನಾಗರಿಕರಿಗೆ ಆಸನ ನೀಡದಿದ್ದಕ್ಕಾಗಿ 14,162 ಪ್ರಕರಣಗಳು, ಮೆಟ್ರೋದಲ್ಲಿ ಆಹಾರ ಸೇವಿಸಿದ್ದಕ್ಕಾಗಿ 554 ಹಾಗೂ ದೊಡ್ಡ ಗಾತ್ರದ ಲಗೇಜ್ ಸಾಗಿಸಿದ್ದಕ್ಕೆ 474 ಪ್ರಕರಣಗಳು ದಾಖಲಾಗಿವೆ.