ಮೂರು ದಿನ ಮೆಟ್ರೋ ಸಂಚಾರ ಸ್ಥಗಿತ – ಹಸಿರು ಮಾರ್ಗದ ಪ್ರಯಾಣದಲ್ಲಿ ವ್ಯತ್ಯಯ

ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ಮಹತ್ವದ ಸುದ್ದಿಯೊಂದಿದೆ. ಮೂರು ದಿನಗಳ ಕಾಲ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್‌ಸಿಲ್ ಮಾಹಿತಿ ನೀಡಿದೆ.
ಜನವರಿ 26 ರಿಂದ ಜನವರಿ 28 ರವರೆಗೆ ಪೀಣ್ಯ ಹಾಗೂ ನಾಗಸಂದ್ರದ ನಡುವೆ ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿತಗೊಳ್ಳಲಿದೆ. ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಾಗಾರಿ ನಡೆಯಲಿರುವ ಕಾರಣ ಶುಕ್ರವಾರದಿಂದ ಮೂರು ದಿನ ಮೆಟ್ರೋ ಸೇವೆ ತಾತ್ಕಲಿಕ ಸ್ಥಗಿತಗೊಳ್ಳಲಿದೆ. ಶುಕ್ರವಾರದಿಂದ ಭಾನುವಾರದವರೆಗೆ ಮೆಟ್ರೋ ರೈಲು ಸಂಚಾರ ತಾತ್ಕಲಿಕ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಜನವರಿ 29ರ ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಸಂಚಾರ ಶುರುವಾಗಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನಿಡಿದೆ.
ಮೆಟ್ರೋದ ಎರಡನೇ ಹಂತದ ಕಾಮಗಾರಿ ಕೂಡ ಸದ್ಯ ತ್ವರಿತಗತಿಯಲ್ಲಿ ಸಾಗುತ್ತಿದೆ. ನಗರದ ಎಲ್ಲ ಪ್ರದೇಶಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಬಿಎಂಆರ್ಸಿಎಲ್ ಚುರುಕಿನ ಕಾಮಗಾರಿ ನಡೆಸುತ್ತಿದೆ. ಇದರಡಿ ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗ ಕಾಮಗಾರಿ ನಡೆಯುತ್ತಿದೆ. ಇದು ಪೂರ್ಣಗೊಂಡ ಬಳಿಕ ಮಾದವಾರ ವರೆಗೆ ಮೆಟ್ರೋ ಸೇವೆ ದೊರೆಯಲಿದೆ. ಮೆಟ್ರೋ ಸಂಚಾರ ಸ್ಥಗಿತಗೊಳ್ಳುವ ಕಾರಣ ಪೀಣ್ಯ ಸುತ್ತ ಮುತ್ತ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.
ಸದ್ಯ ನಮ್ಮ ಮೆಟ್ರೋ ರೈಲುಗಳಲ್ಲಿ ದಿನವೊಂದಕ್ಕೆ ಬರೊಬ್ಬರಿ 6.5 ಲಕ್ಷ ಜನ ಸಂಚರಿಸುತ್ತಿದ್ದಾರೆ. ಈ ಪೈಕಿ 80 ಸಾವಿರದಿಂದ 1 ಲಕ್ಷ ಜನ ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದಾರೆ. ಇದು ಟಿಕೆಟ್ ಕೌಂಟರ್ನ ಒತ್ತಡ ಕಡಿಮೆ ಆಗಲು ಕಾರಣವಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.