ಸೆ. 29ರಂದು ಈ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸೇವೆ ಇರಲ್ಲ!

ಸೆ. 29ರಂದು ಈ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸೇವೆ ಇರಲ್ಲ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಜನರಿಗೆ ಮಹತ್ವದ ಸುದ್ದಿಯೊಂದಿದೆ. ಶುಕ್ರವಾರ ಕೆಂಗೇರಿಯಿಂದ ಮೈಸೂರು ರಸ್ತೆ ವರೆಗೆ ಮೆಟ್ರೋ ರೈಲು ಸೇವೆ ಇರುವುದಿಲ್ಲ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ  ನಿರ್ಮಿಸಲಾದ ಮಾರ್ಗದ ಸುರಕ್ಷತಾ ತಪಾಸಣೆ ಶುಕ್ರವಾರ ನಡೆಯಲಿದೆ. ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು(ದಕ್ಷಿಣ ವೃತ್ತ) ಈ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆ ನಡೆಸುತ್ತಿದ್ದು, ಕೆಂಗೇರಿಯಿಂದ ಮೈಸೂರು ರಸ್ತೆ ವರೆಗೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಇದನ್ನೂ ಓದಿ: ಶುಕ್ರವಾರ ಕರ್ನಾಟಕ ಬಂದ್‌ – ಇಂದು ರಾತ್ರಿಯಿಂದ ತಮಿಳುನಾಡಿಗೆ ಬಸ್ ಸಂಚಾರ ಬಂದ್

ಮೆಟ್ರೋ ನೇರಳೆ ಮಾರ್ಗದ ಕೆಂಗೇರಿಯಿಂದ ಮೈಸೂರು ರಸ್ತೆ ಮಾರ್ಗದಲ್ಲಿ ಶುಕ್ರವಾರ ದಿನಪೂರ್ತಿ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಆದರೆ ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮಾರ್ಗದಲ್ಲಿ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ. ಇನ್ನು ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಸದರಿ ಬದಲಾವಣೆಗಳನ್ನು ಗಮನಿಸಿ ಪ್ರಯಾಣಿಸುವಂತೆ ಬಿಎಂಆರ್ ಸಿಎಲ್​ ಕೋರಿದೆ.

Shwetha M