ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ – ಹೊಸ ವೇಳಾಪಟ್ಟಿಯಲ್ಲಿ ಏನೇನಿದೆ?

ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ – ಹೊಸ ವೇಳಾಪಟ್ಟಿಯಲ್ಲಿ ಏನೇನಿದೆ?

ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆ ರಜೆ ಆರಂಭವಾಗಿದೆ. ಹೀಗಾಗಿ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಹೆಚ್ಚಾಗುತ್ತಿದೆ. ಇದೀಗ ರಾಜ್ಯದ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶದ ಸಮಯ ಬದಲಾವಣೆ ಮಾಡಲಾಗಿದ್ದು, ವೇಳಾಪಟ್ಟಿ ಪರಿಷ್ಕರಣೆ ಬಗ್ಗೆ ಜಿಲ್ಲಾಧಿಕಾರಿ ಎನ್.ಎಂ ನಾಗರಾಜ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಿಗೆ 10 ಸಾವಿರ ಅಟ್ಟಿ ಮಲ್ಲಿಗೆ ಅರ್ಪಣೆ

ಬೇಸಿಗೆ ರಜೆ ಹಿನ್ನಲೆಯಲ್ಲಿ ನಂದಿ ಗಿರಿಧಾಮಕ್ಕೆ ಸಾವಿರಾರು ಮಂದಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ನಂದಿಗಿರಿಧಾಮದ ಪ್ರವೇಶದ ಅವಧಿಯನ್ನು ಪರಿಷ್ಕರಿಸಲಾಗಿದೆ. ಬೆಳಿಗ್ಗೆ 5ರಿಂದ ಸಂಜೆ 7 ಗಂಟೆಯವರೆಗೆ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನೀಡಲಾಗುವುದು ಅಂತಾ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ತಿಳಿಸಿದ್ದಾರೆ.

ನಂದಿ ಗಿರಿಧಾಮದಲ್ಲಿ ಈ ಹಿಂದೆ ಪ್ರವಾಸಿಗರಿಗೆ ಬೆಳಿಗ್ಗೆ 5.30 ರಿಂದ ಸಂಜೆ 6 ಗಂಟೆವರೆಗೆ ಪ್ರವೇಶಕ್ಕೆ ಅವಕಾಶವಿತ್ತು. ಇದೀಗ ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುತ್ತಿದೆ. ಸೂರ್ಯೋದಯ ಮತ್ತು ಸೂರ್ಯಾಸ್ತ ವೀಕ್ಷಣೆಗಾಗಿ ಪ್ರವಾಸಿಗರಿಗೆ ಹೆಚ್ಚಿನ ಕಾಲಾವಕಾಶ ಒದಗಿಸುವ ನಿಟ್ಟಿನಲ್ಲಿ ಮತ್ತು ನಂದಿಗಿರಿಧಾಮ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣಾಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಸಮಯ ವಿಸ್ತರಿಸಲಾಗಿದೆ. ಈ ವಿಸ್ತರಣೆ ಸೆಪ್ಟೆಂಬರ್ 30ರವರೆಗೆ ಅನ್ವಯ ಆಗಲಿದೆ ಎಂದು ಅಂತಾ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

suddiyaana