ನಂದಿನಿ ಹಾಲಿನ ದರ ಏರಿಕೆ – ಆ.1 ರಿಂದ ಲೀಟರ್ ಗೆ 3 ರೂ ಹೆಚ್ಚಳ

ನಂದಿನಿ ಹಾಲಿನ ದರ ಏರಿಕೆ – ಆ.1 ರಿಂದ ಲೀಟರ್ ಗೆ 3 ರೂ ಹೆಚ್ಚಳ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುವ ಕೆಎಂಎಫ್‌ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂಪಾಯಿಗಳಿಗೆ ಏರಿಕೆ ಮಾಡಿದೆ.

ಕಳೆದ ಕೆಲವು ದಿನಗಳ ಹಿಂದೆ ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

ಇದನ್ನೂ ಓದಿ:ಕೈಲಾಸ ಪರ್ವತ ದರ್ಶನ ಸೆಪ್ಟೆಂಬರ್‌ನಿಂದ ಆರಂಭ – ಭಾರತದಿಂದಲೇ ಈ ಬಾರಿ ಅವಕಾಶ!

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು. ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌, KMF ನಿರ್ದೇಶಕ ಹೆಚ್.ಡಿ.ರೇವಣ್ಣ, ಸಭೆಯಲ್ಲಿ ಭಾಗವಹಿಸಿದ್ದರು.

suddiyaana