ರಾಜ್ಯದ ಜನರಿಗೆ ಶಾಕ್‌ ಕೊಟ್ಟ ಸಿಎಂ ಸಿದ್ದರಾಮಯ್ಯ – ಮತ್ತೆ ನಂದಿನಿ ಹಾಲಿನ ದರ ಏರಿಕೆ?

ರಾಜ್ಯದ ಜನರಿಗೆ ಶಾಕ್‌ ಕೊಟ್ಟ ಸಿಎಂ ಸಿದ್ದರಾಮಯ್ಯ – ಮತ್ತೆ ನಂದಿನಿ ಹಾಲಿನ ದರ ಏರಿಕೆ?

ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಶಾಕ್‌ ನೀಡಿದೆ. ಕರ್ನಾಟಕದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿಯೇ ತಿಳಿಸಿದ್ದಾರೆ.

ಇದನ್ನೂ ಓದಿ: KL ಬಾಯಲ್ಲಿ ಈ ಸಲ ಕಪ್ ನಮ್ದೇ – ರಾಹುಲ್ RCB ಸೇರೋದು ಪಕ್ಕಾ?

ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು. ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ತಿಳಿದ್ದಾರೆ. ಇದೀಗ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ್ರೆ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

ಕೆಎಂಎಫ್‌ ನಂದಿನಿ ಹಾಲಿನ ದರವನ್ನು ಜೂನ್‌ 25 ರಂದು ಏರಿಕೆ ಮಾಡಿತ್ತು. ಪ್ರತಿ ಲೀಟರ್‌ ಹಾಲಿನ ದರ 2 ರೂ. ಹೆಚ್ಚಿಸಿತ್ತು. ಪ್ರತಿ ಲೀಟರ್‌ ಪ್ಯಾಕೆಟ್‌ ಹಾಲಿನ ದರವನ್ನ 2 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿತ್ತು. ಇದರ ಜೊತೆ ಪ್ಯಾಕೆಟ್‌ ಗಾತ್ರವನ್ನು ದೊಡ್ಡದು ಮಾಡಿತ್ತು.1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲನ್ನು 1,050 ಎಂಎಲ್‌, ಅರ್ಧ ಲೀಟರ್‌ ಪ್ಯಾಕೆಟ್‌ ಅನ್ನು 550 ಎಂಎಲ್‌ ಹಾಲು ಸಿಗುವಂತೆ ಗಾತ್ರವನ್ನು ದೊಡ್ಡದು ಮಾಡಿತ್ತು.

Shwetha M