ಮೆಲೋನಿಗೆ ಪ್ರಧಾನಿ ಮೋದಿ ಮೆಲೋಡಿ ಗಿಫ್ಟ್!‌ – ಭಾರತದ ಸ್ಪೆಷಲ್ ಉಡುಗೊರೆಗೆ ಇಟಲಿ ಪ್ರಧಾನಿ ಫುಲ್ ಫಿದಾ!

ಮೆಲೋನಿಗೆ ಪ್ರಧಾನಿ ಮೋದಿ ಮೆಲೋಡಿ ಗಿಫ್ಟ್!‌ – ಭಾರತದ ಸ್ಪೆಷಲ್ ಉಡುಗೊರೆಗೆ ಇಟಲಿ ಪ್ರಧಾನಿ ಫುಲ್ ಫಿದಾ!

ಪ್ರಧಾನಿ ನರೇಂದ್ರ ಮೋದಿ ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿಯವರಿಗೆ ಇಟಲಿ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಆತ್ಮೀಯ ಸ್ವಾಗತ ಕೋರಿದ್ದಾರೆ. ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜಾರ್ಜಿಯಾ ಮೆಲೋನಿ ಅವರು, ವೆಲ್ಕಮ್ ಟು ರೋಮ್, ಮೈ ಫ್ರೆಂಡ್ ಎಂದು ಹೇಳಿದ್ದು, ಮೋದಿ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದರು. ಇದೀಗ ಪ್ರಧಾನಿ ಮೋದಿ ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್‌ ನೀಡಿದ್ದಾರೆ.

ಇದನ್ನೂ ಓದಿ: ಬಣ್ಣ ಬಣ್ಣದ ಮಾತುಗಳನ್ನಾಡಿ ಚಿನ್ನ ಲೂಟಿ – ಹೋಲ್‌ಸೇಲ್ ಖರೀದಿ ನೆಪದಲ್ಲಿ 1 ಕೆಜಿ 850 ಗ್ರಾಂ ಚಿನ್ನ ಕಳ್ಳತನ

ಮೋದಿ ಹಾಗೂ ಮೆಲೋನಿ ಉತ್ತಮ ಸ್ನೇಹಿತರಾಗಿದ್ದು, ಇವರಿಬ್ಬರ ಸ್ನೇಹವನ್ನು ಸಾಮಾಜಿಕ ಜಾಲತಾಣದಲ್ಲಿ ಮೆಲೋಡಿ ಎಂದೇ ಕರೆಯಲಾಗುತ್ತಿತ್ತು. ಇದೀಗ ಮೋದಿ ಮೆಲೋಡಿ ಚಾಕೋಲೇಟ್ ಕೊಡುವ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಭಾರತದ ಪ್ರಸಿದ್ಧ ಮೆಲೋಡಿ  ಚಾಕೋಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಮೋದಿ ಚಾಕೋಲೇಟ್ ಕೊಡುವ ವೀಡಿಯೋವನ್ನು ಮೆಲೋನಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಉಡುಗೊರೆ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Shwetha M

Leave a Reply

Your email address will not be published. Required fields are marked *