69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ – ‘777 ಚಾರ್ಲಿ’ಗೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ – ‘777 ಚಾರ್ಲಿ’ಗೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ

ಕೇಂದ್ರ ಸರ್ಕಾರ ನೀಡುವ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನ ಘೋಷಣೆ ಮಾಡಲಾಗಿದೆ. 2021ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯು ತೆಲುಗಿನ ಪುಷ್ಪ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಪಡೆದುಕೊಂಡಿದ್ದಾರೆ. ಅತ್ಯುತ್ತಮ ನಟಿ ಪ್ರಶಸ್ತಿ ಇಬ್ಬರ ಪಾಲಾಗಿದೆ. ಗಂಗೂಬಾಯಿ ಕಾಟಿಯಾ ಚಿತ್ರಕ್ಕಾಗಿ ಆಲಿಯಾ ಭಟ್ ಮತ್ತು ಮಿಮಿ ಚಿತ್ರಕ್ಕಾಗಿ ಕೀರ್ತಿ ಸನನ್ ಪಡೆದುಕೊಂಡಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್​ ಅತ್ಯುತ್ತಮ ಭಾವೈಕ್ಯತೆಯ ಪ್ರಶಸ್ತಿಯನ್ನು ಬಾಚಿಕೊಂಡಿದ್ರೆ ರಾಜ್​ಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾವು ಅತ್ಯುತ್ತಮ ಜನಪ್ರಿಯ ಸಿನಿಮಾ ಪ್ರಶಸ್ತಿ ಗಿಟ್ಟಿಸಿಕೊಂಡಿದೆ. ಶ್ರೇಯಾ ಘೋಷಾಲ್ ಅತ್ಯುತ್ತಮ ಗಾಯಕಿ ಹಾಗೇ ಕಾಲ ಭೈರವಗೆ ಅತ್ಯುತ್ತಮ ಗಾಯಕ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಕನ್ನಡ ಚಲನಚಿತ್ರವಾಗಿ ರಕ್ಷಿತ್ ಶೆಟ್ಟಿ ಅಭಿನಯದ  ‘777 ಚಾರ್ಲಿ’ ಸಿನಿಮಾ ಭಾಜನವಾಗಿದೆ.

ಇದನ್ನೂ ಓದಿ: 12 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ – ಕೊಡವ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಹರ್ಷಿಕಾ, ಭುವನ್‌

ಇನ್ನು ಅತ್ಯುತ್ತಮ ಹಿಂದಿ ಚಲನಚಿತ್ರವಾಗಿ ‘ಸರ್ದಾರ್ ಉಧಮ್’ ಪ್ರಶಸ್ತಿ ಪಡೆದುಕೊಂಡಿದೆ. ಕೊರೊನಾ ಬಳಿಕ ಪ್ರಶಸ್ತಿ ಘೋಷಣೆಯನ್ನ ನಿಲ್ಲಿಸಿದ್ದ ಕೇಂದ್ರ ಸರ್ಕಾರ ಕೊವಿಡ್ ಬಳಿಕ ಇದೇ ಮೊದಲ ಬಾರಿಗೆ 2021ರಲ್ಲಿ ರಿಲೀಸ್ ಆಗಿರುವ ಚಿತ್ರಗಳಿಗೆ ಮಾತ್ರ ಪ್ರಶಸ್ತಿ ಘೋಷಣೆ ಮಾಡಿದೆ. ಸಿನಿಮಾ ರಂಗಕ್ಕೆ ನೀಡುವ ದೇಶದ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ರಾಷ್ಟ್ರಪತಿಗಳೇ ಈ ಪ್ರಶಸ್ತಿಯನ್ನು ಪ್ರಧಾನ ಮಾಡುತ್ತಾರೆ.

suddiyaana