ಪಾಕಿಸ್ತಾನದ ನೂತನ ಪ್ರಧಾನಿಯಾಗಿ ನವಾಜ್ ಷರೀಫ್ ಸಹೋದರ ಶಹಬಾಜ್ ಷರೀಫ್ ಆಯ್ಕೆ

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ನವಾಜ್ ಷರೀಫ್ ಸಹೋದರ ಶಹಬಾಜ್ ಷರೀಫ್ ಆಯ್ಕೆ

ಆರ್ಥಿಕ ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಪಾಕಿಸ್ತಾನಕ್ಕೆ ಚುನಾವಣೆಯಲ್ಲಿ ಅತಂತ್ರ ತೀರ್ಪು ಬಂದಿದೆ. ಇದೀಗ ಪಾಕಿಸ್ತಾನದ ನೂತನ ಪ್ರಧಾನಿಯನ್ನು ಆಯ್ಕೆ ಮಾಡಲಾಗಿದೆ. ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರು ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಪಕ್ಷದ ವರಿಷ್ಠ ನವಾಜ್ ಷರೀಫ್ (74) ಅವರು ತಮ್ಮ ಕಿರಿಯ ಸಹೋದರ ಶೆಹಬಾಜ್ ಷರೀಫ್ (72) ಅವರನ್ನು ಪ್ರಧಾನಿ ಹುದ್ದೆಗೆ ಶಿಫಾರಸು ಮಾಡಿದ್ದಾರೆ. ಜೊತೆಗೆ ಪುತ್ರಿ ಮರ್ಯಮ್ ನವಾಜ್ (50) ಅವರನ್ನು ಪಂಜಾಬ್ ಪ್ರಾಂತ್ಯ ಮುಖ್ಯಮಂತ್ರಿ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇಮ್ರಾನ್ ಖಾನ್ ಸರ್ಕಾರ ಪತನವಾದ ನಂತರ ಶಹಬಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿಯಾಗಿದ್ದರು.

ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಅನ್ನದಾತರ ಪ್ರತಿಭಟನೆ – 60ಕ್ಕೂ ಹೆಚ್ಚು ರೈತರಿಗೆ ಗಾಯ

ನೂತನ ಪ್ರಧಾನಿಯಾಗಿ ಆಯ್ಕೆಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಹಬಾಜ್ ಷರೀಫ್, ಪಿಎಂಎಲ್-ಎನ್ (ಮುಂದಿನ ಸರ್ಕಾರ ರಚಿಸಲು) ಬೆಂಬಲಿಸುವ ರಾಜಕೀಯ ಪಕ್ಷಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ವಿವಿಧ ಪಕ್ಷಗಳ ನಿಮ್ಮ ಸಹಕಾರವು ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರುವ ಭರವಸೆ ಇದೆ. ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಿಎಂಎಲ್-ಎನ್ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚಿಸೋದಾಗಿ ಹೇಳಿದ್ದಾರೆ.

ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ತಮ್ಮ ತಂದೆ ಆಸಿಫ್ ಅಲಿ ಜರ್ದಾರಿಯನ್ನು ಮತ್ತೆ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪಿಪಿಪಿ ಅಧ್ಯಕ್ಷ ಜರ್ದಾರಿ (68) ಅವರು 2008 ರಿಂದ 2013 ರವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು. ತಮ್ಮ ತಂದೆ ಮುಂದಿನ ರಾಷ್ಟ್ರಪತಿಯಾಗಬೇಕೆಂದು ಬಯಸುವುದಾಗಿಯೂ ಬಿಲಾವಲ್ ಹೇಳಿದ್ದಾರೆ.

Shwetha M