ನೀರಜ್ ಚೋಪ್ರಾ ಮತ್ತೊಮ್ಮೆ ವಿಶ್ವದ ನಂಬರ್ 1 – ನಾಲ್ಕನೇ ಸ್ಥಾನದಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್

ನೀರಜ್ ಚೋಪ್ರಾ ಮತ್ತೊಮ್ಮೆ ವಿಶ್ವದ ನಂಬರ್ 1 – ನಾಲ್ಕನೇ ಸ್ಥಾನದಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್

ಭಾರತದ ಹೆಮ್ಮೆಯ ಜಾವೆಲಿನ್ ಕ್ರೀಡಾಪಟು ನೀರಜ್ ಚೋಪ್ರಾ ವಿಶ್ವದ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ. ಗ್ರೆನಡಾದ ಆಂಡರ್ಸನ್ ಪೀಟರ್ಸ್ ಅವರನ್ನು ಹಿಂದಿಕ್ಕಿ ಈ ಸಾಧನೆ ಮಾಡಿದ್ದಾರೆ. ಇದರ ಮಧ್ಯೆ ಪಾಕಿಸ್ತಾನದ ಅರ್ಷದ್ ನದೀಮ್ ನಾಲ್ಕನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಇದನ್ನೂ ಓದಿ: ENG ಸರಣಿ ಆಡ್ಬೇಕಿತ್ತಾ ಶ್ರೇಯಸ್ ಅಯ್ಯರ್ -ವೈಟ್ ಬಾಲ್ ಹೀರೋ ಟೆಸ್ಟ್ ಗಿಲ್ಲ ಯಾಕೆ?

ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮೇಲೆ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದರು. ಇದೀಗ ಸತತ ಗೆಲುವಿನ ನಂತರ ನೀರಜ್ ಚೋಪ್ರಾ ಮತ್ತೊಮ್ಮೆ ವಿಶ್ವದ ನಂಬರ್ 1 ಜಾವೆಲಿನ್ ಎಸೆತಗಾರ ಪಟ್ಟವನ್ನು ಅಲಂಕರಿಸಿದ್ದಾರೆ. ಆಂಡರ್ಸನ್ ಪೀಟರ್ಸ್ ಅವರನ್ನು ಹಿಂದಿಕ್ಕಿ 1445 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಇನ್ನು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ಪಾಕಿಸ್ತಾನದ ಅರ್ಷದ್ ನದೀಮ್  ಜಾವೆಲಿನ್ ವಿಶ್ವ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನೀರಜ್ ಚೋಪ್ರಾ 1445 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದರೆ, ಆಂಡರ್ಸನ್ ಪೀಟರ್ಸ್‌ 1431 ಅಂಕಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಜರ್ಮನಿಯ ಜೂಲಿಯನ್ ವೆಬರ್ 1407 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನದ ಅರ್ಷದ್ ನದೀಮ್ 1370 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿಶ್ವದ ನಂಬರ್ ಜಾವಲಿನ್ ಕ್ರೀಡಾಪಟು ನಮ್ಮ ಬೆಂಗಳೂರಿಗೆ ಸದ್ಯದಲ್ಲೇ ಬರಲಿದ್ದಾರೆ. ಜುಲೈ 5 ರಿಂದ ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಕ್ಲಾಸಿಕ್ ಅಂತರರಾಷ್ಟ್ರೀಯ ಜಾವೆಲಿನ್ ಥ್ರೋ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ವಿಶ್ವದ ಅನೇಕ ಅತ್ಯುತ್ತಮ ಆಟಗಾರರು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಸೇರಿದಂತೆ 5 ಭಾರತೀಯ ಆಟಗಾರರು ಸಹ ಈ ಸ್ಪರ್ಧೆಯಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶಿಸಲಿದ್ದಾರೆ. ಭಾರತದಲ್ಲಿ ಮೊದಲ ಬಾರಿಗೆ ಅಂತರರಾಷ್ಟ್ರೀಯ ಜಾವೆಲಿನ್ ಥ್ರೋ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.

Sulekha