ಫೇಸ್‌ಬುಕ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ! – ಈ ದೇಶದಲ್ಲಿ ಇನ್ಮುಂದೆ ಹೊಸ ರೂಲ್ಸ್!

ಫೇಸ್‌ಬುಕ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ! – ಈ ದೇಶದಲ್ಲಿ ಇನ್ಮುಂದೆ ಹೊಸ ರೂಲ್ಸ್!

ಪ್ರಪಂಚದಾದ್ಯಂತ ಹೆಚ್ಚಿನ ಸಂಖ್ಯೆಯ ಜನರು ಫೇಸ್‌ಬುಕ್ ಮತ್ತು ಎಕ್ಸ್ ಸೇರಿದಂತೆ ಹಲವು ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳನ್ನು ಬಳಸುತ್ತಾರೆ. ಕೆಲವರು ಇಲ್ಲಿ ವೀಡಿಯೊಗಳನ್ನು ಮಾಡಿ ಅಪ್ಲೋಡ್ ಮಾಡಿದರೆ  ಇನ್ನು ಕೆಲವರು ಬ್ಲಾಗ್‌ಗಳನ್ನು ಮಾಡುತ್ತಾರೆ. ಕೆಲವರಿಗೆ ಹಣ ಸಂಪಾದನೆ ಮಾಡುವುದಕ್ಕೆ ಇದು ಉತ್ತಮ ಮಾರ್ಗವಾಗಿದೆ. ಆದ್ರೀಗ ಸೋಶಿಯಲ್‌ ಮೀಡಿಯಾ ಬಳಕೆದಾರರಿಗೆ ಶಾಕಿಂಗ್‌ ಸುದ್ದಿಯೊಂದಿದೆ. ಇದೀಗ ಈ ದೇಶದಲ್ಲಿ 26 ಸೋಶಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್‌ಗಳನ್ನ ಬ್ಯಾನ್‌ ಮಾಡಲಾಗಿದೆ.

ಇದನ್ನೂ ಓದಿ: ಎಲ್ಲೆಂದರಲ್ಲಿ ಪೊರಕೆ ಇಟ್ಟರೆ ಸಮಸ್ಯೆ ಫಿಕ್ಸ್ – ವಾಸ್ತು ಪ್ರಕಾರ ಪೊರಕೆ ಎಲ್ಲಿಡಬೇಕು ಗೊತ್ತಾ?

ಇತ್ತೀಚೆಗೆ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಸೋಶಿಯಲ್‌ ಮೀಡಿಯಾ ಬಳಕೆ ಮಾಡ್ತಿದ್ದಾರೆ.. ಆದ್ರೀಗ ನೇಪಾಳ ಸರ್ಕಾರ ಫೇಸ್‌ಬುಕ್‌, ಎಕ್ಸ್‌, ಯೂಟ್ಯೂಬ್‌ ಸೇರಿದಂತೆ 26 ಸೋಷಿಯಲ್‌ ಮೀಡಿಯಾಗಳಿಗೆ ನಿಷೇಧ ವಿಧಿಸಲಾಗಿದೆ. ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ.

ಸೋಶಿಯಲ್‌ ಮೀಡಿಯಾ ಕಂಪನಿಗಳು ಸ್ಥಳೀಯ ಮಟ್ಟದಲ್ಲಿ ನೋಂದಣಿಯಾಗಿರಲಿಲ್ಲ. ಜಾಹೀರಾತುಗಳ ಮೇಲೆ ಸರ್ಕಾರದ ನಿಯಂತ್ರಣ ಇರಲಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಸ್ಥಳೀಯ ನೋಂದಣಿವರೆಗೂ ಬಳಕೆಗೆ ತಡೆ ಹಾಕುವಂತೆ ಕೋರ್ಟ್‌ ಸೂಚಿಸಿತ್ತು. ಇದರ ಬೆನ್ನಲ್ಲೇ ಸರ್ಕಾರದಿಂದ ದೂರಸಂಪರ್ಕ ಪ್ರಾಧಿಕಾರಕ್ಕೆ ಪತ್ರ ರವಾನೆಯಾಗಿದೆ. ಈ ಪ್ಲಾಟ್‌ಫಾರ್ಮ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ಸರ್ಕಾರ ನಿರ್ದೇಶಿಸಿದೆ.

Shwetha M