ಮೋದಿಯಿಂದ ಸಂಸತ್ ಭವನ ಉದ್ಘಾಟನೆಗೆ ವಿರೋಧ – ರಾಷ್ಟ್ರಪತಿಯಿಂದ ಲೋಕಾರ್ಪಣೆಗೆ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

ಮೋದಿಯಿಂದ ಸಂಸತ್ ಭವನ ಉದ್ಘಾಟನೆಗೆ ವಿರೋಧ – ರಾಷ್ಟ್ರಪತಿಯಿಂದ ಲೋಕಾರ್ಪಣೆಗೆ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನೂತನ ಸಂಸತ್‌ ಭವನ ಈಗಾಗ್ಲೇ ನಿರ್ಮಾಣಗೊಂಡಿದ್ದು, ಉದ್ಘಾಟನೆಯೊಂದು ಮಾತ್ರ ಬಾಕಿ ಇದೆ. ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ ಭವನವನ್ನು ಉದ್ಘಾಟನೆ ಮಾಡಲಿದ್ದಾರೆ. ಆದರೆ . ಅದ್ರೆ ಅದಕ್ಕೂ ಮುನ್ನವೇ ಸಂಸತ್ ಉದ್ಘಾಟನೆ ವಿಚಾರದಲ್ಲಿ ಕಿತ್ತಾಟ ಶುರುವಾಗಿದೆ. ಹೊಸದಾಗಿ ನಿರ್ಮಾಣವಾಗಿರುವ ಸಂಸತ್ತನ್ನ ಪ್ರಧಾನಿ ಮೋದಿ ಉದ್ಘಾಟನೆ ಮಾಡ್ತಿರೋದಕ್ಕೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಮೋದಿಯಿಂದ ನೂತನ ಸಂಸತ್ ಭವನ ಉದ್ಘಾಟನೆಗೆ ವಿರೋಧ –  ರಾಷ್ಟ್ರಪತಿಯಿಂದ ಲೋಕಾರ್ಪಣೆಗೆ ವಿಪಕ್ಷಗಳ ಪಟ್ಟು

ನೂತನ ಸಂಸತ್ತನ್ನ ಮೋದಿ ಉದ್ಘಾಟನೆ ಮಾಡಬಾರದು ಎಂದು ಕಾಂಗ್ರೆಸ್‌, ಟಿಎಂಸಿ, ಆಪ್‌, ಜೆಡಿಯು ಸೇರಿದಂತೆ 20 ವಿರೋಧ ಪಕ್ಷಗಳು ಬಹಿಷ್ಕಾರ ಹಾಕಿದ್ದವು. ಈ ಬೆನ್ನಲ್ಲೇ ನೂತನ ಸಂಸತ್ತನ್ನು ರಾಷ್ಟ್ರಪತಿಗಳಿಂದ ಉದ್ಘಾಟಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡದೇ ಪ್ರಧಾನಿ ಮೋದಿ (ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ. ಯಾವುದೇ ಸದನವನ್ನು ಕರೆಯುವ ಮತ್ತು ಮುಂದೂಡುವ ಅಧಿಕಾರ ರಾಷ್ಟ್ರಪತಿಗಳಿಗೆ ಇದೆ. ಸಂಸತ್ತು ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ರಾಷ್ಟ್ರಪತಿಗಳಿಗೆ ಇರುವುದರಿಂದ ಅವರಿಂದಲೇ ಲೋಕಾರ್ಪಣೆ ಮಾಡಬೇಕೆಂದು ಎಂದು ವಕೀಲ ಸಿಆರ್ ಜಯ ಸುಕಿನ್ ತಮ್ಮ ಅರ್ಜಿಯಲ್ಲಿ  ಉಲ್ಲೇಖಿಸಿದ್ದಾರೆ.

ರಾಷ್ಟ್ರಪತಿ ಸಂಸತ್ತಿನ ಅವಿಭಾಜ್ಯ ಅಂಗ. ಶಿಲಾನ್ಯಾಸ ಸಮಾರಂಭದಿಂದ ರಾಷ್ಟ್ರಪತಿಯನ್ನು ದೂರವಿಟ್ಟಿದ್ದು ಏಕೆ? ಈಗ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯವರನ್ನು ಆಹ್ವಾನಿಸುತ್ತಿಲ್ಲ. ಸರಕಾರದ ಈ ನಿರ್ಧಾರ ಸರಿಯಲ್ಲ ಎಂದು  ಅರ್ಜಿಯಲ್ಲಿ ದೂರಲಾಗಿದೆ.

suddiyaana