ಹೊಸ ವರ್ಷಾಚರಣೆಯಂದು ತುಮಕೂರಿನ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ! – ಎರಡು ದಿನ ಸಾರ್ವಜನಿಕರಿಗೆ ನಿರ್ಬಂಧ!
ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಜನರು ಪಾರ್ಟಿ, ಪಿಕ್‌ನಿಕ್‌ಗೆ, ಪ್ರವಾಸಿ ತಾಣಗಳಿಗೆ ತೆರಳಲು ಈಗಾಗಲೇ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇದೀಗ ತುಮಕೂರಿನ ಪ್ರವಾಸಿ ತಾಣಗಳಲ್ಲಿ ಹೊಸವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಡಿ. 31 ಹಾಗೂ ಜ.1 ರಂದು ತುಮಕೂರಿನ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಇದನ್ನೂ ಓದಿ: ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಬೌಲರ್ಸ್ ಎಡವುತ್ತಿದ್ದಾರಾ?
ಹೊಸ ವರ್ಷಾಚರಣೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ತುಮಕೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ. ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ಡಿ. 31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷಾಚರಣೆ ವೇಳೆ ದೇವರಾಯನದುರ್ಗ, ನಾಮದ ಚಿಲುಮೆ ಮತ್ತು ಬಸದಿ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗಾಗಿ ಕಾನೂನು ಬಾಹಿರ ಚಟುವಟಿಕೆಗಳನ್ನ ಮಾಡುವ ಸಾಧ್ಯತೆ ಇರುತ್ತದೆ. ಬೆಟ್ಟದ ರಸ್ತೆಗಳಲ್ಲಿ ತಿರುವುಗಳು ಹೆಚ್ಚಾಗಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಒಂದು ವೇಳೆ ಕಾನೂನು ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.