ಇನ್ನು ಮುಂದೆ ನ್ಯೂಯಾರ್ಕ್ ನಲ್ಲೂ ದೀಪಾವಳಿ ಹಬ್ಬಕ್ಕೆ ಶಾಲೆಗಳಿಗೆ ರಜೆ!

ಇನ್ನು ಮುಂದೆ ನ್ಯೂಯಾರ್ಕ್ ನಲ್ಲೂ ದೀಪಾವಳಿ ಹಬ್ಬಕ್ಕೆ ಶಾಲೆಗಳಿಗೆ ರಜೆ!

ನ್ಯೂಯಾರ್ಕ್: ಕತ್ತಲನ್ನು ಹೊಡೆದೋಡಿಸಿ ದೀಪದ ಜ್ಞಾನ ಬೆಳಗುವ ದೀಪಾವಳಿ ಹಬ್ಬವನ್ನು ಭಾರತ ಮಾತ್ರವಲ್ಲದೇ ಹಲವು ರಾಷ್ಟ್ರಗಳಲ್ಲಿ ಆಚರಿಸಲಾಗುತ್ತಿದೆ. ಹಲವು ವರ್ಷಗಳಿಂದ ನ್ಯೂಯಾರ್ಕ್ ನಲ್ಲಿ ದೀಪಾವಳಿ ಹಬ್ಬಕ್ಕೆ ಶಾಲೆಗಳಿಗೆ ರಜೆ ನೀಡಬೇಕು ಅನ್ನೋ ಆಗ್ರಹವಾಗಿತ್ತು. ಇದೀಗ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಮುಗಿಸಿ ತವರಿಗೆ ವಾಪಸ್ ಆದ ಬೆನ್ನಲ್ಲೇ ನ್ಯೂಯಾರ್ಕ್‌ ಮೇಯರ್ ಮಹತ್ವದ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಬಿಪರ್‌ ಜಾಯ್‌ 1977ರ ಬಳಿಕ ಉದ್ಭವಿಸಿದ ಅತೀ ದೀರ್ಘಾವಧಿಯ ಚಂಡಮಾರುತ!

ನ್ಯೂಯಾರ್ಕ್ ನಗರದಲ್ಲಿ ದಕ್ಷಿಣ ಏಷ್ಯಾ ಮತ್ತು ಇಂಡೋ-ಕೆರಿಬಿಯನ್ ಸಮುದಾಯಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ನ್ಯೂಯಾರ್ಕ್ ನಗರದ ಶಾಲೆಗಳಿಗೆ ದೀಪಾವಳಿಯಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ ಎಂದು ಮೇಯರ್ ಎರಿಕ್ ಆಡಮ್ಸ್ ಅವರು ತಿಳಿಸಿದ್ದಾರೆ.

ನ್ಯೂಯಾರ್ಕ್ ಎಲ್ಲಾ ಶಾಲೆಗಳಿಗೆ ದೀಪಾವಳಿ ಹಬ್ಬದ ದಿನ ಸರ್ಕಾರಿ ರಜೆ ಎಂದು ಘೋಷಣೆ ಮಾಡಲಾಗಿದೆ. ಎಲ್ಲಾ ಸದಸ್ಯರ ಒಮ್ಮತ ನಿರ್ಧಾರ ಮೇರೆಗೆ ಈ ಆದೇಶ ನೀಡಲಾಗಿದೆ ಎಂದು ಎರಿಕ್ ಆ್ಯಡಮ್ಸ್ ಹೇಳಿದ್ದಾರೆ. ಆದರೆ ಸರ್ಕಾರಿ ರಜೆ ಘೋಷಿಸಿದರೂ ನ್ಯೂಯಾರ್ಕ್ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. ಕಾರಣ ಈ ಬಾರಿ ದೀಪಾವಳಿ ಹಬ್ಬ ನವೆಂಬರ್ 12 ರಂದ ಆಚರಿಸಲಾಗುತ್ತಿದೆ. ಇದು ಭಾನುವಾರವಾಗಿದೆ.

ಹಿಂದೂಗಳು, ಸಿಖ್ಖರು, ಜೈನರು ಮತ್ತು ಕೆಲವು ಬೌದ್ಧರು ಸೇರಿದಂತೆ ಸುಮಾರು 2 ಲಕ್ಷ ನ್ಯೂಯಾರ್ಕ್ ನಗರದ ನಿವಾಸಿಗಳು ದೀಪಾವಳಿಯನ್ನು ಆಚರಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಲೆಗಳ ಸಾರ್ವಜನಿಕ ರಜೆ ಪಟ್ಟಿಗೆ ಇದೀಗ ದೀಪಾವಳಿಯು ಸೇರಿಕೊಂಡಿದೆ ಎಂದು ಘೋಷಿಸಿದ ಆಡಮ್ಸ್, “ಇದು ನಿರಂತರವಾಗಿ ಬದಲಾಗುತ್ತಿರುವ ನಗರವಾಗಿದ್ದು, ಪ್ರಪಂಚದಾದ್ಯಂತ ಎಲ್ಲಾ ಸಮುದಾಯಗಳನ್ನು ನಿರಂತರವಾಗಿ ಸ್ವಾಗತಿಸುತ್ತಿದೆ” ಎಂದು ಹೇಳಿದ್ದಾರೆ.

suddiyaana