ಮುಂದಿನ ವಾರ 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ!

ಮುಂದಿನ ವಾರ 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ!

ವೀಕೆಂಡ್‌ನಲ್ಲಿ ಕಾಫಿನಾಡಿನ ಪ್ರವಾಸಿತಾಣಗಳಿಗೆ ತೆರಳುವವರಿಗೆ ಮಹತ್ವದ ಸುದ್ದಿಯಿದೆ. ಮುಂದಿನ ವಾರ ದತ್ತಪೀಠಕ್ಕೆ 3 ದಿನಗಳ ಕಾಲ ಪ್ರವಾಸಿ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ದತ್ತಮಾಲಾ ಅಭಿಯಾನದ ಹಿನ್ನೆಲೆ ಪ್ರವಾಸಿ ತಾಣ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ 3 ದಿನ ಬಂದ್ ಮಾಡಲಾಗಿದೆ. ನವೆಂಬರ್ 4 ಬೆಳಗ್ಗೆ 6 ಗಂಟೆಯಿಂದ ನವೆಂಬರ್ 6ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಸಜ್ಜಾದ ಸಿಲಿಕಾನ್ ಸಿಟಿ – ಕಂಬಳ ನಡೆಯುವ ಮೊದಲೇ ದಾಖಲೆ ಬರೆದ ಬೆಂಗಳೂರು ಕಂಬಳ..!

ಅಕ್ಟೋಬರ್ 30 ರಿಂದ ನವೆಂಬರ್ 5 ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೂ ಪ್ರವಾಸ ನಿಷೇಧಿಸಲಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿಷೇಧ ಹೇರಲಾಗಿದೆ. ದತ್ತಪೀಠಕ್ಕೆ ಡಿಸಿ, ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Shwetha M