ಹಿರಿಯರ ತೀರ್ಮಾನವೇ ಅಂತಿಮ ಎಂದ ನಿಖಿಲ್ ಕುಮಾರಸ್ವಾಮಿ – ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಫಿಕ್ಸ್?
ನಿಖಿಲ್ ಕುಮಾರಸ್ವಾಮಿಗೆ ಪಕ್ಷದ ಪ್ರಮುಖ ಜವಾಬ್ದಾರಿ ವಹಿಸುವ ಬಗ್ಗೆ ಹೆಚ್ಡಿ ದೇವೇಗೌಡರು ಇತ್ತೀಚೆಗಷ್ಟೇ ಸುಳಿವು ನೀಡಿದ್ರು.. ರಾಜ್ಯಾಧ್ಯಕ್ಷ ಹುದ್ದೆ ಆಯ್ಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರೂ ನಾನು ಪಾಲಿಸಲು ಬದ್ಧ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪಿಂಕ್ ಟೆಸ್ಟಲ್ಲಿ ಭಾರತದ ಪ್ಲಾಫ್ ಶೋ! – ರೋಹಿತ್ ಶರ್ಮಾ ತಲೆದಂಡ ಫಿಕ್ಸ್
ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಹಿತ ಕಾಪಾಡುವುದು ನನ್ನ ಜವಾಬ್ದಾರಿ. ಹೀಗಾಗೀ ಪಕ್ಷ ಕಟ್ಟಿ ಬೆಳೆಸಿದ ಕಟ್ಟ ಕಡೆಯ ಕಾರ್ಯಕರ್ತನಿಗೂ ರಾಜಕೀಯ, ಸಾಮಾಜಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಅವರಲ್ಲಿ ಒಬ್ಬನಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ. ನಮ್ಮಲ್ಲಿ ಹಿರಿಯ ನಾಯಕರಿದ್ದಾರೆ. ಅವರ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರೂ ನಾನು ಪಾಲಿಸಲು ಬದ್ಧ ಎಂದು ಹೇಳಿದ್ದಾರೆ.
ಉಪಚುನಾವಣೆ ಬಳಿಕ ನಾನು ಕೈಕಟ್ಟಿ ಕೂತಿಲ್ಲ. ರೈತರ ನಿಯೋಗದೊಂದಿದೆ ದೆಹಲಿಗೆ ಬಂದಿದ್ದೇನೆ. ತಂಬಾಕು ಬೆಳೆಗಾರರ ಸಮಸ್ಯೆಗಳ ಕೇಂದ್ರ ಮಂತ್ರಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇದೇ ಅವಧಿಯಲ್ಲಿ ಗೃಹ ಸಚಿವ ಅಮಿತ್ ಶಾ, ಉಸ್ತುವಾರಿ ರಾಧಮೋಹನ್ ಸಿಂಗ್, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದೇನೆ. ಮೈತ್ರಿಯನ್ನು ಬಲಪಡಿಸುವ ಬಗ್ಗೆ, ಸ್ಥಳೀಯ ಚುನಾವಣೆಗಳಲ್ಲಿ ಒಟ್ಟಾಗಿ ಹೋಗುವ ಬಗ್ಗೆ ಚರ್ಚೆ ಮಾಡಿದ್ದೇನೆ. ಅಮಿತ್ ಶಾ ಅವರಿಗೆ ರಾಜ್ಯ ಬಿಜೆಪಿ ಬೆಳವಣಿಗೆ ಬಗ್ಗೆ ಗೊತ್ತಿರುವ ಹಿನ್ನೆಲೆ ಆ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದರು.